Friday, May 17, 2024

UPSC ಗೆ ತಯಾರಿ ನಡೆಸುತ್ತಿದ್ದ ಯುವಕ ನೇಣಿಗೆ ಶರಣು!

ದೊಡ್ಡಬಳ್ಳಾಪುರ : ಯುಪಿಎಸ್​ಸಿ ಪರೀಕ್ಷೆಗೆ ತಯಾರಿ ನಡೆಸಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನಡೆದಿದೆ.

ಜಗದೀಶ್​ (28) ಆತ್ಮಹತ್ಯೆಗೆ ಮಾಡಿಕೊಂಡ ಯುವಕ, ತಾಲೂಕಿನ ನೆಲ್ಲುಕುಂಟೆ ಸಮೀಪದ ಮಜರಾಹೊಸಹಳ್ಳಿ ನಿವಾಸಿಯಾಗಿದ್ದ ಜಗದೀಶ್‌, ಎಂಎಎಂಎಡ್, ವ್ಯಾಸಂಗ ಮಾಡುತ್ತಿದ್ದ. ಮಾ.12ರಂದು ಮನೆಯಲ್ಲಿ ಎಲ್ಲರೂ ಊರಿಗೆ ಹೋಗಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಗೀತಂ ವಿವಿಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; 7 ಜನರ ವಿರುದ್ಧ ದೂರು ದಾಖಲು

ಬುಧವಾರ ರಾತ್ರಿ ಜಗದೀಶ್ ತಾಯಿ ಮರಳಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ ಆ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾನೆ.

ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

RELATED ARTICLES

Related Articles

TRENDING ARTICLES