Saturday, May 18, 2024

Petrol-Diesel Price: ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ

ಬೆಂಗಳೂರು:ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. 

ಹೌದು,ನಾಳೆಯಿಂದಲ್ಲೇ ಪೆಟ್ರೋಲ್, ಡೀಸೆಲ್ ದರ 2 ರೂಪಾಯಿ ಇಳಿಕೆಯಾಗಿದೆ.

ಈ ಕುರಿತು ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಪೆಟ್ರೋಲಿಯಂ & ನ್ಯಾಚುರಲ್​ ಗ್ಯಾಸ್​ ಸಚಿವಾಲಯ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಇಳಿಕೆ ಮಾಡಿದೆ. ನಾಳೆ ಬೆಳಗ್ಗೆಯಿಂದ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಡೀಸೆಲ್ ಬೆಲೆ 87.89 ರೂಪಾಯಿ ಇದ್ದು. ನಾಳೆ(ಮಾರ್ಚ್ 15) ಬೆಳಗ್ಗೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಇಳಿಕೆಯಾಗಲಿದೆ. ಪೆಟ್ರೋಲ್ ಬೆಲೆ 99.94 ರೂಪಾಯಿ ಹಾಗೂ ಡೀಸೆಲ್ ಬೆಲೆ 85.89 ರೂಪಾಯಿಗೆ ಇಳಿಕೆ ಆಗಲಿದೆ.

ಮೊನ್ನೆಯಷ್ಟೇ LPGಯಲ್ಲಿ ₹100 ಕಡಿತಗೊಳಿಸಿದ್ದ ಕೇಂದ್ರ ಸರ್ಕಾರ ಇದೀಗ ವಾಹನ ಸವಾರರಿಗೂಗುಡ್ ನ್ಯೂಸ್ ಕೊಟ್ಟಿದೆ.

 

RELATED ARTICLES

Related Articles

TRENDING ARTICLES