Saturday, May 4, 2024

BSY ಲೈಂಗಿಕ ದೌರ್ಜನ್ಯ; ತನಿಖೆ ಹೊಣೆ ಸಿಐಡಿಗೆ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು CIDಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಯಡಿಯೂರಪ್ಪ ವಿರುದ್ಧದದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ: ಬಿಎಸ್​ವೈ ವಿರುದ್ದ ಪೋಕ್ಸೊ ಪ್ರಕರಣ ದಾಖಲು!

ಏನಿದು ಪ್ರಕರಣ?

ಫೆ.2. 2024 ರಂದು ಸಂತ್ರಸ್ತೆ ಅಪ್ರಾಪ್ತ ಯುವತಿ ಹಾಗು ಆಕೆಯ ತಾಯಿ ಮಮತಾ ಸಿಂಗ್​ ಬಿಎಸ್​ವೈ ಮನೆಗೆ ಭೇಟಿ ನೀಡಿದ್ದರು, ತಮ್ಮ ಮಗಳ ಮೇಲೆ ಈ ಹಿಂದೆ ನಡೆದಿದ್ದ ಲೈಂಗಿಕ ಅತ್ಯಾಚರ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಳ್ಳಲು ತೆರಳಿದ್ದರು. ಈ ವೇಳೆ ಮಾಜಿ ಸಿಎಂ ಬಿಎಸ್​ವೈ ತಮ್ಮ ಮಗಳನ್ನು ಪ್ರತ್ಯೇಕ ಕೊಠಡಿಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆ ಹಿನ್ನೆಲೆ ಮಾರ್ಚ್​ 14 ರಂದು ಸದಾಶಿವನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಯಡಿಯೂರಪ್ಪ ವಿರುದ್ದ ಲೈಂಗಿಕ ದೌರ್ಜನ್ಯ ಹಾಗು ಪೋಕ್ಸೋ ಪ್ರಕರಣವನ್ನು ದಾಖಲಿಸಿದ್ದರು.

RELATED ARTICLES

Related Articles

TRENDING ARTICLES