Sunday, May 5, 2024

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಪರ್ದಿಸುತ್ತೇನೆ ಎಂದು ಸ್ವಯಂ ಘೋಷಣೆ ಮಾಡಿದ್ದಾರೆ

ಪುತ್ರ ಕಾಂತೇಶ್ ಈಶ್ವರಪ್ಪಗೆ ಟಿಕೆಟ್ ಸಿಗದ ಪರಿಸ್ಥಿತಿಯಲ್ಲಿ ತಮ್ಮ ಮುಂದಿನ ನಡೆಯೇನು ಎಂಬುದನ್ನು ಚರ್ಚಿಸಲು ಇಂದು (ಮಾ. 15) ಸಂಜೆ ಶಿವಮೊಗ್ಗದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ತಮ್ಮ ಅಭಿಮಾನಿಗಳ ಸಭೆಯನ್ನು ಈಶ್ವರಪ್ಪ ಕರೆದಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಅವರು ಆನಂತರ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

ತಮ್ಮ ಪುತ್ರನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಬಂಡಾಯವ ಈಶ್ವರಪ್ಪ ಈ ರೀತಿಯ ಘೋಷಣೆ ಮಾಡಿದ್ದಾರೆ.

ಇದು ಪ್ರಧಾನಿ ಮೋದಿ ವಿರುದ್ದದ ಸ್ಪರ್ಧೆಯಲ್ಲ

ಕುಟುಂಬ ರಾಜಕಾರಣದ ವಿರುದ್ದ, ಹಿಂದುತ್ವದ ರಕ್ಷಣೆ, ಸಿದ್ದಾಂತದ ಪರವಾಗಿ, ನೊಂದ ಕಾರ್ಯಕರ್ತರ ಧ್ವನಿಯಾಗಿ, ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಇದು ಪ್ರಧಾನಿ ಮೋದಿ ವಿರುದ್ದದ ಸ್ಪರ್ಧೆಯಲ್ಲ ಎಂದು ಕೆ.ಎಸ್.ಈಶ್ವರಪ್ಪ ಸ್ಪಷ್ಟವಾಗಿ ಹೇಳಿದರು. ಅಲ್ಲದೆ, ಇದು ಉದ್ವೇಗದ ತೀರ್ಮಾನವಲ್ಲ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES