Thursday, September 19, 2024

ದಿನಭವಿಷ್ಯ: ಇಂದು ಧನ ಲಕ್ಷ್ಮಿ ಯೋಗ, ಈ ರಾಶಿಗೆ ತಾಯಿ ಲಕ್ಷ್ಮಿ ಕೃಪೆ!

2024 ಮಾರ್ಚ್ 15ರ ಶುಕ್ರವಾರವಾದ ಇಂದು, ಚಂದ್ರನು ವೃಷಭ ರಾಶಿಯಲ್ಲಿ ಉಳಿಯುತ್ತಾನೆ. ಹಾಗೆಯೇ ಇಂದು ಫಾಲ್ಗುಣ ಮಾಸದ ಶುಕ್ಲ ಪಕ್ಷದ ಷಷ್ಠಿ ತಿಥಿ ಇದ್ದು ಈ ದಿನ ಪ್ರೀತಿ ಯೋಗ, ಶುಕ್ರ ಮಂಗಳ ಸಂಯೋಗದಿಂದ ಧನ ಲಕ್ಷ್ಮಿ ಯೋಗ ಮತ್ತು ಕೃತಿಕಾ ನಕ್ಷತ್ರದ ಶುಭ ಸಂಯೋಗ ನಡೆಯಲಿದೆ. ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು ಎನ್ನುವುದನ್ನು ತಿಳಿದುಕೊಳ್ಳಿ.

ಮೇಷ: ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಮಧ್ಯಮವಾಗಿರಲಿದೆ .

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ.

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ.

ಇದನ್ನೂ ಓದಿ: ಸಾಂಬರಿನಲ್ಲಿ ಮೆಣಸಿನಕಾಯಿ ಸಿಕ್ಕಂತೆ ರಾಜಕೀಯದಲ್ಲೂ ಟೀಕೆಗಳು ಸಹಜ : ಯದುವೀರ್ ಒಡೆಯರ್

ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ ಇದ್ದು, ಇದರಿಂದ ನೀವು ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ.

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ.

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡದಿಂದಾಗಿ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಒತ್ತಡ ಇರಲಿದ್ದು, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ.

ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ ತರಲಿದೆ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ.

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಹೆಚ್ಚಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ.

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರೂ, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ.

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ.ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ.

RELATED ARTICLES

Related Articles

TRENDING ARTICLES