Saturday, May 11, 2024

ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು,ಅವಮಾನಿಸಬೇಡಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು,ಅದನ್ನುಅವಮಾನಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂಆಯ್ತು, ಜಾರಿ ಮಾಡಿದ್ದೂ ಆಯ್ತು. ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಬಿಜೆಪಿಯ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ನರೇಂದ್ರ ಮೋದಿ, ಬೊಮ್ಮಾಯಿ, ಆರ್.ಅಶೋಕ್, ವಿಜಯೇಂದ್ರ ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದರು.ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಹೊಸ ಸುಳ್ಳು ಹಬ್ಬಿಸಿದರು. ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದರು.ಬಿಜೆಪಿ ಮಂದಿ ಮೊದಲಿಗೆ ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡು, ಸುಳ್ಳು ಹೇಳಿದರು. ಆದರೆ ನಮ್ಮ ಗ್ಯಾರಂಟಿಗಳು ಯಶಸ್ವೀ ಜಾರಿ ಆದ ಬಳಿಕ ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ಟೀಕಿಸಿದರು.

ನಾವು ನುಡಿದಂತೆ ನಡೆದಿದ್ದೇವೆ

ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ. ತಾನು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಮೋದಿ ಘೋಷಿಸಿದ್ದರು.15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದರಾ? ಬಿಜೆಪಿಯವರಾಗಲಿ,ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

 

RELATED ARTICLES

Related Articles

TRENDING ARTICLES