Friday, May 3, 2024

ಲೋಕಸಭಾ ಚುನಾವಣೆ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಬಿಡುಗಡೆ

ದೆಹಲಿ: ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ಮಾರ್ಚ್​,16 (ನಾಳೆ) ರಂದು ಪತ್ರಿಕಾಗೋಷ್ಠಿಯನ್ನು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಎಂದು ಹೇಳಿದೆ.

ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗುವುದು. ಘೋಷಣೆ ಮಾಡಿದ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ಈಗಾಗಲೇ  ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳು ಈಗಾಗಲೇ 543 ಲೋಕಸಭಾ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಲು ಪ್ರಾರಂಭಿಸಿವೆ. ಲೋಕಸಭಾ ಚುನಾವಣೆಗೆ ಬಿಜೆಪಿ ಇದುವರೆಗೆ 267 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದರೆ, ಕಾಂಗ್ರೆಸ್ ಎರಡು ಪಟ್ಟಿಗಳಲ್ಲಿ 82 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

4 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೂ ನಾಳೆ ಮುಹೂರ್ತ

ಲೋಕಸಭೆ ಮಾತ್ರವಲ್ಲದೇ 4 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೂ ನಾಳೆ ಮುಹೂರ್ತ ಫಿಕ್ಸ್ ಆಗಲಿದ್ದು, ಏಪ್ರಿಲ್/ಮೇ ತಿಂಗಳಲ್ಲಿ ಮತದಾನ ನಡೆಯಲಿರುವ ನಾಲ್ಕು ರಾಜ್ಯಗಳೆಂದರೆ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ, ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

RELATED ARTICLES

Related Articles

TRENDING ARTICLES