Sunday, May 12, 2024

ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಪ್ರಕರಣ: ಮೂವರೂ ಆರೋಪಿಗಳಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ’ ಎಂದು ಆರೋಪಿಸಲಾದ ಪ್ರಕರಣದಲ್ಲಿ ಬಂಧಿತ ಮೂವರಿಗೆ ನಗರದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: ದಿನಭವಿಷ್ಯ: ಇಂದು ಧನ ಲಕ್ಷ್ಮಿ ಯೋಗ, ಈ ರಾಶಿಗೆ ತಾಯಿ ಲಕ್ಷ್ಮಿ ಕೃಪೆ!

ಈ ಕುರಿತಂತೆ ಬಂಧಿತರಾದ ದೆಹಲಿಯ ಕಿಶನ್ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್.ಮುನಾವರ್ ಅಹ್ಮದ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ.ವಿಜೇತ್ ಪುರಸ್ಕರಿಸಿದ್ದಾರೆ.

ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಆರೋಪಿಗಳು ₹1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ಭಾರತ ಬಿಟ್ಟು ಹೋಗಬಾರದು, ವಿಚಾರಣಾ ನ್ಯಾಯಾಲಯದ ಮುದ್ದತುಗಳಿಗೆ ಹಾಜರಾಗಬೇಕು ಮತ್ತು ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಕೂಡದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

RELATED ARTICLES

Related Articles

TRENDING ARTICLES