Friday, May 3, 2024

ಲೈಂಗಿಕ ದೌರ್ಜನ್ಯ: ಬಿಎಸ್​ವೈ ವಿರುದ್ದ ಪೋಕ್ಸೊ ಪ್ರಕರಣ ದಾಖಲು!

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ದ ಅಪ್ರಾಪ್ತೆ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆ ತಾಯಿ ಮಮತಾ ಸಿಂಗ್ ನಿಡಿರುವ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ 3ನೇ ಹಂತಕ್ಕೆ ಸಚಿವ ಸಂಪುಟ ಒಪ್ಪಿಗೆ: ಸಚಿವ ಕೃಷ್ಣ ಭೈರೇಗೌಡ

ಮಮತ ಸಿಂಗ್ ತಮ್ಮ ಸಂತ್ರಸ್ತ ಮಗಳೊಂದಿಗೆ 2024ರ ಫೆಬ್ರವರಿ 2 ರಂದು ಬಿಎಸ್​ವೈ ಮನೆಗೆ ತೆರಳಿದ್ದಾರೆ. ಅಪ್ರಾಪ್ತೆ ಮೇಲೆ ಈ ಹಿಂದೆ ಅತ್ಯಾಚಾರವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣವನ್ನು ಎಸ್​ಐಟಿಗೆ ನೀಡಿ ನ್ಯಾಯ ಒದಗಿಸುವಂತೆ ಕೋರಿ ಬಿಎಸ್​ವೈ ಅವರನ್ನು ಕೇಳಿಕೊಂಡಿದ್ದಾರೆ. ಈ ವೇಳೆ ನಮ್ಮೊಂದಿಗೆ ಮಾತನಾಡಲು 9 ನಿಮಿಷಗಳ ಕಾಲಾವಕಾಶ ನೀಡಿದ್ದರು. ಬಳಿಕ ನನ್ನ ಮಗಳನ್ನು ರೂಂ ಗೆ ಕರೆದುಕೊಂಡು ಹೋದ ಮಾಜಿ ಸಿಎಂ ಯಡಿಯೂರಪ್ಪ ಅವರು ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ತಾಯಿ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆ ಬಿಎಸ್​ ಯಡಿಯೂರಪ್ಪ ವಿರುದ್ದ ಪೋಕ್ಸೋ ಹಾಗು 354(A) ಅಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

RELATED ARTICLES

Related Articles

TRENDING ARTICLES