Friday, September 20, 2024

ಬೆಂಗಳೂರಿನಲ್ಲಿ ಹೆಣ್ಣುಮಕ್ಕಳ ಕಳ್ಳಸಾಗಾಣೆ ಆರೋಪ: 20 ಬಾಲಕಿಯ ರಕ್ಷಣೆ

ಬೆಂಗಳೂರು : ಬಾಲಕಿಯರ ಕಳ್ಳ ಸಾಗಾಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನಲ್ಲಿ  ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ.

ಮಾನವ ಕಳ್ಳಸಾಗಣೆ ನಡೆಯುತ್ತಿದೆ ಎಂದು ಎನ್​ಸಿಪಿಸಿಆರ್​ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದರು. ಮದರಸದಲ್ಲಿ ಸುಮಾರು 10-20 ಮಕ್ಕಳಿದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ‌ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.

ಇದನ್ನೂ ಓದಿ: ಬ್ಲಡ್​ ಬ್ಯಾಂಕ್​ಗಳಲ್ಲಿ ರಕ್ತದ ಕೊರತೆ: ಆತಂಕ ವ್ಯಕ್ತಪಡಿಸಿದ ವೈದ್ಯರು!

ಈ ಬಾಲಕಿಯರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ಅನಾಥ ಆಶ್ರಮದ ಮೇಲೆ ಪೊಲೀಸರು ದಾಳಿ ನಡೆಸಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ.

RELATED ARTICLES

Related Articles

TRENDING ARTICLES