Monday, May 13, 2024

ಕರ್ನಾಟಕಕ್ಕೆ ಪ್ರಧಾನಿ ಮೋದಿಗೆ ಸ್ವಾಗತ : ‘ಚೌಕಿದಾರ’ ಎನ್ನುವ ನೀವು ಜನರ ಪ್ರಶ್ನೆಗೆ ಉತ್ತರಿಸಿ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಬಿಜೆಪಿ ಸರ್ಕಾರ ಯಾಕೆ ಮೌನವಾಗಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ ಮೋದಿ ಆಗಮನ ಹಿನ್ನಲೆ ಟ್ವೀಟ್ ಮಾಡಿರುವ ಅವರು, ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಕುಟುಕಿದ್ದಾರೆ.

ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ, ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ 10 ವರ್ಷಗಳಿಂದ ಅಧಿಕಾರದಲ್ಲಿರುವ ಈ ಬಗ್ಗೆ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿಯವರೇ ಉತ್ತರಿಸಿ

ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಪ್ರಧಾನಿ ಮೋದಿಯವರೇ ಉತ್ತರಿಸಿ ಎಂದು ಹೇಳಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಪಾತ್ರವಿದೆ

ಸುಪ್ರೀಂಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

RELATED ARTICLES

Related Articles

TRENDING ARTICLES