Friday, May 17, 2024

ಡಿವಿಜಿ ಕಗ್ಗದ ಸಾಲುಗಳನ್ನು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ಕೊಟ್ಟ ಪ್ರತಾಪ್​ ಸಿಂಹ

ಬೆಂಗಳೂರು: ಪ್ರತಾಪ ಸಿಂಹಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದು,ಎರಡು ಬಾರಿ ಸಂಸದರಾಗಿ ಇವರು 10 ವರ್ಷ ಸೇವೆ ಸಲ್ಲಿಸಿದ್ದಾರೆ.ಮೂರನೆ ಸಲವೂ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಟಿಕೆಟ್​ ಕೈತಪ್ಪಿದಕ್ಕಾಗಿ ಇಲ್ಲ ಸಲ್ಲದ ಮಾತಗಳನ್ನಾಡುತ್ತಿರುವ ವಿರೋಧಿಗಳಿಗೆ ಪ್ರತಾಪ್​  ಸಿಂಹ ಡಿವಿಜಿಯ ಸಾಲಿಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಟಾಂಗ್​ ನೀಡಿದ್ದಾರೆ.

ಸತ್ತೆನೆಂದೆನಬೇಡ, ಸೋತೆನೆಂದನಬೇಡ.

ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ.

ಮೃತ್ಯುವೆನ್ನುವುದೊಂದು ತೆರೆಯಿಳಿತ,

ತೆರೆಯೇರು.ಮತ್ತೆ ತೋರ್ಪುದು ನಾಳೆ.

ಮಂಕುತಿಮ್ಮ.

ಸೋಲು ಗೆಲುವು ಸ್ವಾಭಾವಿಕವೇ.ಒಂದು ಸೋಲಾಗಬಹುದು ಒಂದು ಸಲಗೆಲುವಾಗಬಹುದು.ಇಂದು ಬಿದ್ದ ಅಲೆ ನಾಳೆ ಏಳುತ್ತದೆ.ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ.ಎನ್ನುವ ಅರ್ಥದಲ್ಲಿ ಡಿವಿಜಿ ಕಗ್ಗ ಹಂಚಿಕೊಂಡು ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಬರೆದುಕೊಂಡಿದ್ದಾರೆ.

ಬ್ರಹ್ಮವಸ್ತುವು ಆನಂದಪಡುವುದಕ್ಕೋಸ್ಕರ ಪ್ರಕೃತಿಯ ಮೂಲಕವಾಗಿ ಆಟವನ್ನು ನಡೆಸುತ್ತಿದೆ. ತ್ರಿಗುಣಗಳ ವ್ಯತ್ಯಾಸದಿಂದ ಸೋಲು, ಗೆಲವು ಸ್ವಾಭಾವಿಕವೇ. ಈ ಲೀಲೆ ಸತತವಾಗಿ ಕೊನೆಯಿಲ್ಲದೆ ನಡೆಯುತ್ತಿರುವುದರಿಂದ ಇಲ್ಲಿ ಒಂದು ಸಲ ಸೋಲಾಗಬಹುದು, ಇನ್ನೊಂದು ಸಲ ಗೆಲುವಾಗಬಹುದು. ಆದದ್ದರಿಂದ ಈ ತತ್ತ್ವವನ್ನು ಮನದಟ್ಟು ಮಾಡಿಕೊಂಡು, ನನ್ನ ಜೀವನ ಕೆಟ್ಟಿತು, ನಾನು ಸಾಧಿಸಬೇಕಾದದ್ದನ್ನು ಸಾಧಿಸದೆಯೇ ಸಾಯುತ್ತಿದ್ದೇನೆ, ನಾನು ಸೋತೆ. ನನ್ನ ಒಳಸತ್ಯ ಬತ್ತಿಹೋಗಿದೆ, ನಾನು ಕೆಲಸಕ್ಕೆ ಬಾರದವನಾದೆ ಎಂದು-ನಿರಾಸೆಯ ಮನೋಭಾವವನ್ನು ತಳೆಯುವುದು ತಪ್ಪು ಎನ್ನುತ್ತಾರೆ ತಿಮ್ಮಗುರು.

ಮೃತ್ಯು ಎಂಬುದು ಒಂದು ಅಲೆಯಂತೆ, ಅಲೆ ಮೇಲೇಳುತ್ತದೆ ಮತ್ತೆ ಬೀಳುತ್ತದೆ, ಇನ್ನೊಂದು ಸಲ ಏಳುತ್ತದೆ. ಹೀಗೆ ನಮ್ಮ ಜೀವನ ಒಂದೇ ಜನ್ಮದಲ್ಲಿ ಮುಗಿದುಹೋಗುವುದಿಲ್ಲ. ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ.

RELATED ARTICLES

Related Articles

TRENDING ARTICLES