Friday, May 3, 2024

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ : 7 ಹಂತದಲ್ಲಿ ಚುನಾವಣೆ, ಜೂನ್ 4ರಂದು ಮತ ಎಣಿಕೆ

ನವದೆಹಲಿ : ಭಾರಿ ನಿರೀಕ್ಷೆ ಹುಟ್ಟಿಸಿರುವ 2024 ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಮುಹೂರ್ತ ಫಿಕ್ಸ್​ ಮಾಡಿದೆ.

2024ರ ಲೋಕಸಭಾ ಚುನಾವಣೆಯು ಏಪ್ರಿಲ್ 19ರಿಂದ ದೇಶದಲ್ಲಿ 7 ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಹಾಗೂ ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ.

ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಮತ್ತು ಏಪ್ರಿಲ್ 26ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಮೂರನೇ ಹಂತದ ಮತದಾನ ಮೇ 7ರಂದು, 4ನೇ ಹಂತದ ಮತದಾನ ಮೇ 13 ರಂದು ಹಾಗೂ 5ನೇ ಹಂತದ ಮತದಾನ ಮೇ 20ರಂದು ನಡೆಯಲಿದೆ. ಜೂನ್​ 4ರಂದು ಮತ ಎಣಿಕೆ (ಫಲಿತಾಂಶ) ನಡೆಯಲಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‍ಕುಮಾರ್ ಅವರು, ಚುನಾವಣೆಯ ಮಾಹಿತಿ ನೀಡಿದರು. ಜೂನ್ 16ಕ್ಕೆ ಲೋಕಸಭಾ ಅವಧಿ ಮುಕ್ತಾಯ ಆಗಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದರು.

17ನೇ ಲೋಕಸಭೆಯ ಅವಧಿಯು 16, ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ತಿಳಿಸಿದರು.

10.5 ಲಕ್ಷ ಮತದಾನ ಕೇಂದ್ರಗಳು

ದೇಶಾದ್ಯಂತ 96.8 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

19.74 ಕೋಟಿ ಯುವ ಮತದಾರರು

ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದರು.

ವೃದ್ಧರು ಮನೆಯಿಂದಲೇ ಮತದಾನ

85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ, 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್​ಚೇರ್ ವ್ಯವಸ್ಥೆ ಇರಲಿದ್ದು​, ಸ್ವಯಂಸೇವಕರೂ ಇರಲಿದ್ದಾರೆ. ಇನ್ನೂ, ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್​ಡೆಸ್ಕ್​, ವಿದ್ಯುತ್​ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

2024 ಚುನಾವಣಾ ವರ್ಷ

‘ಈ ಬಾರಿ ಇಡೀ ವಿಶ್ವವೇ ದೇಶದ ಚುನಾವಣೆಯತ್ತ ನೋಡುತ್ತಿದೆ. 2024ರಲ್ಲಿ ಭಾರತದ ಜೊತೆ ಜಗತ್ತಿನ ಹಲವು ದೇಶಗಳಲ್ಲಿ ಚುನಾವಣೆ ನಡೆಯಲಿದೆ. ಆದ್ದರಿಂದಲೇ ಈ ವರ್ಷ ಚುನಾವಣಾ ವರ್ಷ ಎನ್ನಬಹುದು. ಮುಂಬರುವ ಎಲ್ಲಾ ಚುನಾವಣೆಯಲ್ಲಿ ಎಲ್ಲಾ ಮತದಾರರು ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕು’ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮನವಿ ಮಾಡಿದರು.

RELATED ARTICLES

Related Articles

TRENDING ARTICLES