Thursday, May 2, 2024

ನಮ್ಮ ಮೆಟ್ರೋ ಅಧಿಕಾರಿಯಿಂದ ಮಹಿಳಾ ಸೆಕ್ಯೂರಿಟಿಗೆ ಲೈಂಗಿಕ ಕಿರುಕುಳ: FIR ದಾಖಲು

ಬೆಂಗಳೂರು: ನಮ್ಮ ಮೆಟ್ರೋ ಅಧಿಕಾರಿಯಿಂದ ಮಹಿಳಾ ಸೆಕ್ಯೂರಿಟಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು,ಆರೋಪಿಯ ವಿರುದ್ಧ FIR ದಾಖಲಾಗಿದೆ. 

ರಾಜಾಜಿನಗರ ಮೆಟ್ರೋ ನಿಲ್ದಾಣದ ಸಹಾಯಕ ಶಾಖಾಧಿಕಾರಿ ಗಜೇಂದ್ರ. ಪಿ ಅವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಮಹಿಳಾ ಭದ್ರತಾ ಸಿಬ್ಬಂದಿ ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ

ಮಹಿಳಾ ಸಿಬ್ಬಂದಿಗೆ ಗಜೇಂದ್ರ ಅಶ್ಲೀಲ ಪದಗಳಿಂದ ನಿಂದಿಸೋದಲ್ಲದೆ, ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನೀಡಿದ್ದಾನೆ. ಸಹಕರಿಸದೆ ಇದ್ದರೆ ಮಹಿಳೆಯರಿಗೆ ಬೇರೆ ಕಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ‌ ಹಾಕಿದ್ದಾನೆ ಎಂದು ಆರೋಪ ಮಾಡಿದ್ದಾಳೆ.

ಈ ಬಗ್ಗೆಸೆಕ್ಯೂರಿಟಿ ಏಜೆನ್ಸಿ ಮಾಲೀಕನಿಗೆ ಹೇಳಿದ್ದರೆ ಅವರು ಸಹಕರಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.
ಸಹಕರಿಸಿ ಇಲ್ಲ ಕೆಲಸದಿಂದ ತೆಗೆಯುತ್ತೇನೆ ಅಂತಾರೆ ಅಂತ ದೂರಿನಲ್ಲಿಉಲ್ಲೇಖವಾಗಿದೆ.ಬಿಎಂಆರ್ ಸಿಎಲ್ ಹಿರಿಯ ಅಧಿಕಾರಿಗಳಿಗೂ ದೂರು ನೀಡಿದ್ದಾಳೆ.

ದೂರಿನಲ್ಲಿ ಏನಿದೆ?
ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿರುವ ಹೇಮಾಲತಾ
ನಿಲ್ದಾಣದ ಎಎಸ್ಓ ಗಜೇಂದ್ರ.ಪಿ ದೂರುದಾರೆಗೆ ಹಾಗೂ ಇತರೆ ಸಿಬ್ಬಂದಿಗೆ ನಿಂದಿಸ್ತಾರೆ
ಒತ್ತಾಯ ಪೂರ್ವಕವಾಗಿ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸ್ತಾರೆ. ವಿರೋಧ ವ್ಯಕ್ತಪಡಿಸಿದ್ರೆ ಸುಳ್ಳು ಕೇಸ್ ಹಾಕಿ ವರ್ಗಾವಣೆ ಮಾಡ್ತೀವಿ ಅಂತ ಬೆದರಿಸ್ತಾರೆ.ನಮ್ಮ ಏಜೆನ್ಸಿ ಮಾಲೀಕರಿಗೆ ದೂರು ನೀಡಿದ್ರೆ ಸಹಕರಿಸಿ, ಇಲ್ಲ ಕೆಲಸ ಬಿಡಿ ಅಂತಾರೇ ಎಂದು ದೂರು ನೀಡಿದ್ದಾಳೆ.

RELATED ARTICLES

Related Articles

TRENDING ARTICLES