Saturday, April 27, 2024

ಪ್ರಿಯಾಂಕ್ ಖರ್ಗೆ ಬರೀ ಉಪದೇಶ ಕೊಡ್ತಾರೆ : ಬಿ.ವೈ. ವಿಜಯೇಂದ್ರ

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಬರೀ ಉಪದೇಶ ಕೊಡ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಕುಟುಕಿದರು.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕರ್ತರು ಮತ್ತು ಬೇರೆ ಸಮಾಜದವರ ಕೊಲೆ ದಬ್ಬಾಳಿಕೆ, ಗುಂಡಾಗಿರಿ ಕಲಬುರಗಿಯಲ್ಲಿ ಹೆಚ್ಚಾಗಿದೆ. ಈ ಜಿಲ್ಲೆಯ ಮಂತ್ರಿಗಳು ಬರೀ ಉಪದೇಶ ಕೊಡ್ತಾರೆ. ಮತದಾರರು ಈ ಬಾರಿ ಇಂತಹವರಿಗೆ ತಕ್ಕ ಉತ್ತರ ನೀಡ್ತಾರೆ ಎಂದು ಚಾಟಿ ಬೀಸಿದರು.

ಬಿಜೆಪಿ ಪರ ವಾತಾವರಣ ಸೃಷ್ಟಿ

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ ಎಂದು ಹೇಳಿದರು.

ಬಿಜೆಪಿಗೆ ಐತಿಹಾಸಿಕ ಗೆಲುವು ಸಿಗಲಿದೆ

ರಾಜ್ಯದಲ್ಲೂ ಇದೇ ವಾತಾವರಣ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು  ಬಿಜೆಪಿಗೆ ಸಿಗಲಿದೆ ಎಂದು ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES