Saturday, May 11, 2024

ಯುವಕನನ್ನು ಕಾರಿನಲ್ಲೇ ಕೂಡಿ ಹಾಕಿ, ಬೆಂಕಿ ಹಚ್ಚಿ ಕೊಂದ ಪಾಪಿಗಳು

ಶಿವಮೊಗ್ಗ : ಯುವಕನನ್ನು ಆತನ ಕಾರಿನಲ್ಲೇ ಕೂಡಿ ಹಾಕಿ, ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂಬ ಯುವಕನೇ ಭೀಕರವಾಗಿ ಹತ್ಯೆಗೀಡಾದ ಯುವಕ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಯುವಕನನ್ನು ಕೊಲೆ ಮಾಡಲಾಗಿದೆ.

ತಡರಾತ್ರಿ ನಡೆದ ಘಟನೆ, ಇಂದು ತಡವಾಗಿ ಬೆಳಕಿಗೆ ಬಂದಿದೆ. ಯುವಕ ವೀರೇಶ್​ನನ್ನು ಆತನ ಕಾರಿನಲ್ಲೇ ಕೂಡಿ ಹಾಕಿ, ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ. ಆತ ಕೊಂಡೊಯ್ದಿದ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ. ನಿನ್ನೆ ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್​ಗೆ ಕರೆ ಮಾಡಿದ್ದರು ಎನ್ನಲಾಗಿದೆ. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ಬಳಿಕ ಮನೆಗೆ ಹಿಂದಿರುಗಿರಲಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳ ಪತ್ತೆ ಬಲೆ ಬೀಸಿದ ಖಾಕಿ

ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್‌ಪಿ ಕೇಶವ್, ಇನ್ಸ್​ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಠಾಣೆ ಸಬ್​ ಇನ್ಸ್​ಪೆಕ್ಟರ್ ರಮೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

RELATED ARTICLES

Related Articles

TRENDING ARTICLES