Thursday, May 9, 2024

ಖರ್ಗೆ ಕೋಟೆಗೆ ನಮೋ ಎಂಟ್ರಿ.. ಕೆಲವೇ ಕ್ಷಣದಲ್ಲಿ ರೋಡ್ ಶೋ ಆರಂಭ

ಕಲಬುರಗಿ : ಕಲಬುರಗಿಯ ಹೆಲಿಪ್ಯಾಡ್​ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ಕೆಲವೇ ಕ್ಷಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ 14 ನಿಮಿಷಗಳ ಕಾಲ ರೋಡ್​ ಶೋ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನಲೆ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಅಭಿಯಾನ ಇಂದಿನಿಂದ ಆರಂಭವಾಗಿದೆ. ಖರ್ಗೆ ಕೋಟೆಯಲ್ಲಿ ಮೋದಿ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

ಕಲಬುರಗಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದ್ದು, ಎನ್.ವಿ. ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಕಲಬುರಗಿ, ಬೀದರ್‌, ಯಾದಗಿರಿ ಜಿಲ್ಲೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಈಗಾಗಲೇ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪಕ್ಷದ ಗಣ್ಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

RELATED ARTICLES

Related Articles

TRENDING ARTICLES