Friday, May 17, 2024

ಪಾನಿಪೂರಿ ಸೇವಿಸಿ 6 ವರ್ಷದ ಬಾಲಕ ಸಾವು

ದಾವಣಗೆರೆ: ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿದ್ದ ಪ್ರಕರಣದಲ್ಲಿ 6 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಹಜರತ್ ಬಿಲಾಲ್ ಬಿನ್ ಇರ್ಫಾನ್ (6) ಮೃತ ಬಾಲಕ.

ಘಟನೆಯ ವಿವರ

ರಂಜಾನ್ ಹಬ್ಬದ ಹಿನ್ನೆಲೆ ಉಪವಾಸವಿದ್ದ ಮಕ್ಕಳು ಮಾರ್ಚ್‌ 15ರಂದು ಸಂಜೆ ಜಾಮಿಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು. ಬಳಿಕ 19 ಮಕ್ಕಳು ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಲೆಬೆನ್ನೂರಿನಲ್ಲಿ ಪಾನಿಪೂರಿ ಸೇವಿಸಿದ ಬಳಿಕ ವಾಂತಿ ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ 19 ಮಕ್ಕಳನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದೀಗ ಚಿಕಿತ್ಸೆ ಫಲಕಾರಿಯಾಗದೆ ಒಬ್ಬ ಬಾಲಕ ಕೊನೆಯುಸಿರೆಳೆದಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಮೂವರು ಮಕ್ಕಳು ಚೇತರಿಸಿಕೊಂಡಿದ್ದಾರೆ.

 

RELATED ARTICLES

Related Articles

TRENDING ARTICLES