Friday, May 3, 2024

ಕೋಲಾರ ಕ್ಷೇತ್ರ ಜೆಡಿಎಸ್​ಗೆ ಬಿಟ್ಟುಕೊಡುವಂತೆ ಹೆಚ್​ಡಿಕೆ ಪಟ್ಟು!

ಬೆಂಗಳೂರು : ಲೋಕಸಭಾ ಚುನಾವಣೆಗೆ ದಿನಾಂಕ ನಿಗಧಿಯಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಕೋಲಾರ ಕ್ಷೇತ್ರದಿಂದ ಅಭ್ಯರ್ಥಿಗಳ ಆಯ್ಕೆಯ ಕುರಿತು ಗೊಂದಲ ಮುಂದುವರೆದಿದ್ದು, ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಿದೆ.

ಇನ್ನು ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹಗ್ಗಜಗ್ಗಾಟ ಮುಂದುವರೆದಿದ್ದು, ಮಂಡ್ಯ ಬೆನ್ನಲ್ಲೇ ಇದೀಗ ಕೋಲಾರಕ್ಕೂ ಜೆಡಿಎಸ್ ಪಟ್ಟು ಹಿಡಿದಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ನೀಡುವಂತೆ ಬಿಜೆಪಿ ಬಳಿ ಬಿಗಪಟ್ಟು ಹಿಡಿದಿದ್ದು, ಮೈತ್ರಿಕೂಟದ ಭಾಗವಾಗಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಹಂಚಿಕೆ ಮಾಡಿರುವ ಜೆಡಿಎಸ್ ಕೋಲಾರ ಕ್ಷೇತ್ರಕ್ಕೂ ಬೇಡಿಕೆ ಇಟ್ಟಿದೆ.

ಇದನ್ನೂ ಓದಿ: ಇಂದು ಅಪ್ಪು 49ನೇ ಜನ್ಮದಿನದ ಸಂಭ್ರಮ : ಸಮಾದಿ ಬಳಿ ಅಪ್ಪು ಅಭಿಮಾನಿಗಳಿಂದ ಸಂಭ್ರಮಾಚರಣೆ

ಈ ಬಗ್ಗೆ ಬಿಜೆಪಿ ವರಿಷ್ಠರು ಯಾವುದೇ ರೀತಿಯ ಭರವಸೆ ನೀಡಿಲ್ಲ ಎಂದು ಹೇಳಲಾಗಿದೆ. ಬಿಜೆಪಿಯ ಕೇಂದ್ರ ನಾಯಕತ್ವದಿಂದ ಕ್ಷೇತ್ರದ ಬಗ್ಗೆ ಖಚಿತ ಭರವಸೆ ಪಡೆಯಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಶನಿವಾರ ವಿಫಲರಾಗಿದ್ದಾರೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ ಮಾಡಿದರು. ಆದರೆ, ಕುಮಾರಸ್ವಾಮಿ ಅವರಿಗೆ ಯಾವುದೇ ಭರವಸೆ ನೀಡಲು ನಿರಾಕರಿಸಿದ ಶಾ, ರಾಜ್ಯ ಬಿಜೆಪಿ ನಾಯಕರ ಸಲಹೆ ಪಡೆದು ಒಂದೆರೆಡು ದಿನದಲ್ಲಿ ನಿರ್ಧಾರ ಹೇಳುತ್ತೇನೆ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES