Monday, May 20, 2024

ಲೋಕಸಭಾ ಚುನಾವಣೆ: ಮಾ.19 ರಂದು ಕಾಂಗ್ರೆಸ್​​ ನ 2ನೇ ಪಟ್ಟಿ ರಿಲೀಸ್

ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜ್ಯ ರಾಜಕಾರಣದಲ್ಲಿ ಚುನಾವಣೇ ಚಟುವಟಿಕೆಗಳು ಬಿರುಸುಪಡೆದುಕೊಂಡಿದೆ.

ಕಾಂಗ್ರೆಸ್​ ಪಕ್ಷವು ಲೋಕಸಮರಕ್ಕೆ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇನ್ನು ಮಾ.19 ರಂದು ಕಾಂಗ್ರೆಸ್​​ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಕೋಲಾರ ಕ್ಷೇತ್ರ ಜೆಡಿಎಸ್​ಗೆ ಬಿಟ್ಟುಕೊಡುವಂತೆ ಹೆಚ್​ಡಿಕೆ ಪಟ್ಟು!

ಅಭ್ಯರ್ಥಿಗಳ ಎರಡನೇ ಪಟ್ಟಿ ತಯಾರಿ ನಡೆಸಿರುವ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್​ ಅವರು ದೆಹಲಿಗೆ ತೆರಳಲಿದ್ದಾರೆ. ಸಿಇಸಿ ಸಭೆ ಬಳಿಕ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡೋ ಬಗ್ಗೆ ಅಂತಿಮ ಚರ್ಚೆ ನಡೆಸಲಿದ್ದಾರೆ.

ಚುನಾವಣೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಬಳಿ ಅನೌಪಚಾರಿಕವಾಗಿ ಡಿಕೆಶಿ ಚರ್ಚೆ ನಡೆಸಿದ್ದಾರೆ. ಕಗ್ಗಂಟಾಗಿದ್ದ ಆರೇಳು ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆಯಿದೆ. ಬೆಳಗಾವಿ, ಚಿಕ್ಕೋಡಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಉತ್ತರ, ಚಿತ್ರದುರ್ಗ, ಚಾಮರಾಜನಗರ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಂತಿಮಗೊಳಿ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES