Tuesday, May 21, 2024

ನೀತಿ ಸಂಹಿತೆ ಜಾರಿ ನಡುವೆ ಅಕ್ರಮ ಹಣ ಸಾಗಾಟ: 20 ಲಕ್ಷ ರೂ. ಪೊಲೀಸ್ ವಶಕ್ಕೆ

ಬೆಂಗಳೂರು: ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲರ್ಟ್ ಆಗಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂಪಾಯಿಯನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕುಖ್ಯಾತ ಒಡವೇ ಕಳ್ಳರ ಬಂಧನ: ಲಕ್ಷಾಂತರ ಮೌಲ್ಯದ ಒಡವೆ ವಶಕ್ಕೆ

ಅಷ್ಟೆ ಅಲ್ಲದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಜಾಸ್ ಟೋಲ್​ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಕಾರಿನಲ್ಲಿದ್ದ ತಮಿಳುನಾಡಿನ ಉದ್ಯಮಿ ರಘುಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಘುಪತಿ ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ತೆರಳುತ್ತಿದ್ದರು. ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES