Sunday, May 12, 2024

ಜನರು ನಿನ್ನಲ್ಲಿ ದೇವರನ್ನು ಕಾಣುತ್ತಾರೆ, ನೀನು ಆರಾಧ್ಯ ದೈವ : ಅಪ್ಪು ಬಗ್ಗೆ ಶಿವಣ್ಣ ಭಾವುಕ ಮಾತು

ಬೆಂಗಳೂರು : ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬವನ್ನು ಸ್ಮರಣೀಯವಾಗಿ ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದರ ನಡುವೆ ಪ್ರೀತಿಯ ತಮ್ಮ ಅಪ್ಪುಗೆ ವಿಶೇಷವಾಗಿ ಶಿವರಾಜ್‌ಕುಮಾರ್ ಶುಭ ಹಾರೈಸಿದ್ದಾರೆ.

ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ, ನೀನು ಅವರ ಆರಾಧ್ಯ ದೈವ ಎಂದು ಸಾಮಾಜಿಕ ಜಾಲತಾಣದಲ್ಲಿ ಶಿವಣ್ಣ ಪೋಸ್ಟ್ ಮಾಡಿದ್ದಾರೆ.

ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ ಎಂದು ಶಿವಣ್ಣ ಸ್ಮರಿಸಿದ್ದಾರೆ. ಅಪ್ಪು ಆಗಿ ಬಂದು ನೀನು ಪುನೀತ್‌ನಾಗಿ ಎಲ್ಲರ ಮನಸ್ಸಲ್ಲೂ ಭದ್ರವಾಗಿ ಇದ್ದು ಬಿಟ್ಟೆ. ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ. ಎಷ್ಟೋ ಜನಕ್ಕೆ ನೀನು ಮಾರ್ಗದರ್ಶಿ, ಅವರ ಆರಾಧ್ಯ ದೈವ, ಕೋಟಿ ಕೋಟಿ ಅಭಿಮಾನಿಗಳಿಗೆ ನೀನು ಪವರ್ ಸ್ಟಾರ್ ಎಂದು ಹೇಳಿದ್ದಾರೆ.

ಸದಾ ರಾಜನಂತೆ ಬಾಳುವ ತಮ್ಮ

ನನಗೆ ಎಂದೆಂದಿಗೂ ನನ್ನ ಪುಟ್ಟ ತಮ್ಮ. ನನ್ನ ಕೈ ಹಿಡಿದು ನಡೆದ ತಮ್ಮ, ನಿನ್ನ ನಗುವಲ್ಲಿ ನನಗೆ ಸಂತೋಷ ಹುಡುಕಿ ಕೊಟ್ಟ ತಮ್ಮ, ನನ್ನ ಎದೆಯ ಮೇಲೆ ಮಲಗಿದ ತಮ್ಮ, ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಎಂದು ಶಿವರಾಜ್​ಕುಮಾರ್ ಪ್ರೀತಿಯಿಂದ ಶುಭಾಶಯ ಕೋರಿದ್ದಾರೆ.

RELATED ARTICLES

Related Articles

TRENDING ARTICLES