Friday, May 3, 2024

WPL Final: ರಾಯಲ್ ಚಾಲೆಂಜರ್ಸ್ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್​ ಬ್ಯಾಟಿಂಗ್​ ಆಯ್ಕೆ

ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ 2024 ಫೈನಲ್ ಪಂದ್ಯ ಅರುಣ್​ ಜೇಟ್ಲಿ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್​ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ಯಾಟಿಂಗ್​ ಆಯ್ದುಕೊಂಡಿದೆ.ಆರ್​ಸಿಬಿ ವಿರುದ್ಧ ಡೆಲ್ಲಿ ನಾಯಕಿ ಮೆಗ್​ ಲ್ಯಾನಿಂಗ್ ಈ ನಿರ್ಣಯ ಕೈಗೊಂಡಿದ್ದಾರೆ.

ಬೆಂಗಳೂರು ತಂಡ ಮೊದಲ ಬಾರಿಗೆ ಫೈನಲ್​ ತಲುಪಿದೆ. ಡೆಲ್ಲಿ ಕಳೆದ ಬಾರಿಯ ರನ್ನರ್​ಅಪ್​ ಆಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್(ವಿ.ಕೀ), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವಾರೆಹಮ್, ದಿಶಾ ಕಸತ್, ಶ್ರೇಯಾಂಕ ಪಾಟೀಲ್, ಆಶಾ ಸೋಭಾನ, ರೇಣುಕಾ ಠಾಕೂರ್ ಸಿಂಗ್

ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್(ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಮರಿಝನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ (ವಿ.ಕೀ), ಶಿಖಾ ಪಾಂಡೆ, ಮಿನ್ನು ಮಣಿ

RELATED ARTICLES

Related Articles

TRENDING ARTICLES