Friday, May 3, 2024

ಪ್ರಧಾನಿ ಮೋದಿಗೆ 28 ಕ್ಷೇತ್ರ ಗೆಲ್ಲಿಸಿಕೊಡುವ ಭರವಸೆ ನೀಡಿದ ಬಿಎಸ್ ಯಡಿಯೂರಪ್ಪ

ಶಿವಮೊಗ್ಗ: ಪ್ರಧಾನಿ ಮೋದಿ ಚುನಾವಣಾ ರಣಕಹಳೆಯನ್ನು ಮಲೆನಾಡು ಶಿವಮೊಗ್ಗದಲ್ಲಿ ಮೊಳಗಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರ ಕೇವಲ ಚುನಾವಣೆಗೆ ಕೆಲಸ ಮಾಡುವ ಸರ್ಕಾರವಲ್ಲ, ದಿನದ 24 ಗಂಟೆ, ವರ್ಷದ 365 ದಿನಗಳ ಕಾಲ ಗಡಿಯನ್ನು ಸುರಕ್ಷಿತವಾಗಿಡಲು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದೆ.

ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ 6 ಸಾವಿರ ರೂಪಾಯಿ ಅವರ ಖಾತೆಗೆ ಜಮೆ ಮಾಡುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ 4 ಸಾವಿರ ರೂಪಾಯಿ ಸೇರಿಸಿದ್ದ. ಆದರೆ ಈಗಿನ ಸರ್ಕಾರ ರಾಜ್ಯ ನೀಡುವ 4,000 ರೂಪಾಯಿ ಅನುದಾನ ಕಡಿತಗೊಳಿಸಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶ್ರೀರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, ದೇಶವನ್ನು 5ನೇ ಆರ್ಥಿಶಕ್ತಿಯಾಗಿ ಮಾಡಿದ್ದಾರೆ. ಶೀಘ್ರದಲ್ಲೇ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ. ಕಳೆದ ಬಾರಿ ಶಿವಮೊಗ್ಗಕ್ಕೆ ಬಂದಾಗ, ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು. ಇದರಿಂದ ಮಲೆನಾಡಿನ ಅಭಿವೃದ್ಧಿಯ ವೇಗ ಹೆಚ್ಚಾಗಿದೆ

ಮೋದಿ ತಮ್ಮ ಭಾಷಣವನ್ನು ಆನ್‌ಲೈನ್ ಮೂಲಕ ಕನ್ನಡ ಸೇರಿದಂತೆ ಇತರ ಭಾಷೆಗಳಿಗೆ ಅನುವಾದಿಸಿ ನೀಡುತ್ತಾರೆ. ಆರ್ಟಿಪೀಶಿಯಲ್ ಇಂಟಲಿಜೆನ್ಸ್ ಸಹಾಯದ ಮೂಲಕ ನರೇಂದ್ರ ಮೋದಿ ಇನ್ ಕನ್ನಡ ಅನ್ನೋ ಆ್ಯಪ್ಲಿಕೇಶನ್‌ನಲ್ಲಿ ಲಭ್ಯವಿದೆ. ಕನ್ನಡದ ಮೇಲೆ ಪ್ರೀತಿಯಿಂದ ಪ್ರಧಾನಿ ಮೋದಿ, ಪ್ರತಿ ಭಾರಿ ಕರ್ನಾಟಕಕ್ಕೆ ಆಗಮಿಸಿದಾಗ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

 

RELATED ARTICLES

Related Articles

TRENDING ARTICLES