Friday, May 17, 2024

ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ,ಪಕ್ಕದಲ್ಲಿರುವವರಿಗೂ ದ್ರೋಹ‌ ಮಾಡಲ್ಲ: ಪ್ರತಾಪ ಸಿಂಹ

ಮೈಸೂರು: ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ,ಪಕ್ಕದಲ್ಲಿರುವ ಯದುವೀರ್​ಗೂ ದ್ರೋಹ‌ ಮಾಡಲ್ಲ ಅವರನ್ನು ಗೆಲ್ಲಿಸುವುದಷ್ಟೇ ಈಗ ಮುಖ್ಯ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂತ ನಾನು ಹೈಕಮಂಡ್ ಹೇಳಿರಲಿಲ್ಲ.ಈಗಲೂ ಅಷ್ಟೇ ಯಾಕೆ ಟಿಕೆಟ್ ತಪ್ಪಿಸಿದ್ದೀರಿ ಅಂತಾ ನಾನು ಕೇಳಿಯೂ ಇಲ್ಲ, ಅವರು ಹೇಳಿಯೂ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷದಿಂದ ಆಫರ್ ಇತ್ತು ಇಲ್ವಾ ಅದು ಈಗ ಬೇಡ

ಕಾಂಗ್ರೆಸ್ ಪಕ್ಷದಿಂದ ಆಫರ್ ಇತ್ತು ಇಲ್ವಾ ಎಂಬ ಯಾವ ಪ್ರಶ್ನೆಗಳು ಈಗ ಪ್ರಸ್ತುತ ಅಲ್ಲ. ನಮಗೆ ಯದುವೀರ್ ಅವರನ್ನು ಗೆಲ್ಲಿಸುವುದಷ್ಟೇ ಈಗ ಮುಖ್ಯ.

ದೇಶಕ್ಕೆ ಮೋದಿ ಬೇಕು

ದೇಶಕ್ಕೆ ಮೋದಿ ಬೇಕು, ಮೋದಿ ಪರವಾಗಿ ಕೈ ಎತ್ತಲು ಮೈಸೂರಿನಿಂದ ಒಬ್ಬ ವ್ಯಕ್ತಿ ಬೇಕು ಇದಷ್ಟೇ ನಮಗೆ ಮುಖ್ಯ. ಪಕ್ಷ ನನಗೆ ತಾಯಿ ಇದ್ದಾಗೆ. ಇದು ಬರಿ ಬಾಯಿ ಮಾತಲ್ಲ. ಇದು ನನ್ನ ಮನಸಿನ ಮಾತು ಎಂದಿದ್ದಾರೆ.

RELATED ARTICLES

Related Articles

TRENDING ARTICLES