Friday, May 3, 2024

ವಸತಿ ನಿಲಯದಲ್ಲಿ ಆಹಾರ ಸೇವಿಸಿ 40 ಮಕ್ಕಳು ಅಸ್ವಸ್ಥ!

ರಾಯಚೂರು : ವಸತಿ ನಿಲಯದಲ್ಲಿ ನೀಡಿದ ಆಹಾರ ಸೇವಿಸಿ 40 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ನಡೆದಿದೆ.

ಎಂದಿನಂತೆ ಇಂದು ಬೆಳಗ್ಗೆ ವಸತಿ ನಿಲಯದಲ್ಲಿ ಮಕ್ಕಳಿಗಾಗಿ ತಯಾರಿಸಿದ್ದ ಉಪಹಾರವನ್ನು ಮಕ್ಕಳು ಸೇವಿಸಿದ್ದಾರೆ. ಉಪಹಾರ ತಿಂದ ಕೆಲಹೊತ್ತಿನಲ್ಲೇ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ, ಕೂಡಲೆ ಅವರನ್ನು ಅರಕೆರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು, ಆರಂಭದಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ 20 ಮಕ್ಕಳು ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು, ಬಳಿಕ ಒಟ್ಟು 40 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಇಬ್ಬರು ಮಕ್ಕಳನ್ನು ಬೆಂಕಿಗೆ ಎಸೆದು ಆತ್ಮಹತ್ಯೆಗೆ ಶರಣಾದ ತಾಯಿ!

ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮಕ್ಕಳು ಅಸ್ವಸ್ಥರಾಗಲು ನಿಖರ ಕಾರಣ ತಿಳಿದುಬಂದಿಲ್ಲವಾದರು  ವೈದ್ಯರು ಫುಡ್​ ಪಾಯಿಸನ್​ ಎಂದು ಹೇಳಿದ್ದಾರೆ. ಮಕ್ಕಳ ಆರೋಗ್ಯ ವಿಚಾರ ತಿಳಿದ ಪೋಷಕರು ಆಸ್ಪತ್ರೆಗೆ ಧಾವಿಸಿದ್ದು ಆತಂಕಕ್ಕೊಳಗಾಗಿದ್ದಾರೆ.

RELATED ARTICLES

Related Articles

TRENDING ARTICLES