Saturday, May 18, 2024

ಖತರ್ನಾಕ್​ ಚೈನ್​ ಸ್ನಾಚರ್​ಗಳ ಬಂಧನ!

ಬೆಂಗಳೂರು : ಬೈಕ್​ಗಳನ್ನು ಕಳ್ಳತನ ಮಾಡಿ, ಕದ್ದ ಬೈಕ್​ನಲ್ಲೆ ಮಹಿಳೆಯರ ಚೈನ್​ ಎಗರಿಸಿ ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದು ಬಂಧಿತರಿಂದ 20 ಲಕ್ಷಕ್ಕು ಅಧಿಕ ಮೌಲ್ಯದ ಚಿನ್ನಾಭರಣಗಳು ಮತ್ತು ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಪ್ರೀತಿ ನಿರಾಕರಣೆ : ಯುವಕ ಆತ್ಮಹತ್ಯೆ!

ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 22.5 ಲಕ್ಷ ಮೌಲ್ಯದ 365 ಗ್ರಾಂ ಚಿನ್ನಾಭರಣ ಹಾಗು ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್​ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಬೆಂಗಳೂರ ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಸೇರಿ ವಿವಿಧ ಭಾಗಗಳಲ್ಲಿ ಆರೋಪಿಗಳು ಒಟ್ಟು 11ಕ್ಕು ಹೆಚ್ಚು ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಯಲಿಗೆ ಬಂದಿದೆ.

ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳ ವಿರುದ್ದ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES