Friday, May 10, 2024

ನಗರ್ತಪೇಟೆ ಹನುಮಾನ್ ಚಾಲೀಸ ಪ್ರಕರಣ: ಶೋಭ ಕರಂದ್ಲಾಜೆ ಪೊಲೀಸ್ ವಶಕ್ಕೆ

ಬೆಂಗಳೂರು : ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದ ನಗರ್ತಪೇಟೆಯಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರ್ತಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.

ಇದನ್ನೂ ಓದಿ: ಪ್ರೀತಿ ನಿರಾಕರಣೆ : ಯುವಕ ಆತ್ಮಹತ್ಯೆ!

ಗಲಾಟೆ ಪ್ರಕರಣದಲ್ಲಿ ಹಲ್ಲೆಗೆ ಒಳಗಾದ ಮುಖೇಶ್ ಎಂಬುವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ಕರೆದೊಯ್ಯಲು ಮುಂದಾದ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಮುಖೇಶ್ ಅವರನ್ನು ಕರೆದೊಯ್ಯಲು ಮುಂದಾದ ಪೊಲೀಸರ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಅಂಗಡಿಗಳನ್ನು ಬಂದ್ ಮಾಡಿ ರ್ಯಾಲಿ ನಡೆಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಭಟನಕಾರರಿಗೆ ಬೆಂಬಲ ಸೂಚಿಸಿದರು. ಸರ್ಕಾರದ ವೈಫಲ್ಯದಿಂದ ಈ ಘಟನೆ ನಡೆದಿದೆ. ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು. ಇದೇ ವೇಳೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಶಾಸಕ ಸುರೇಶ್ ಕುಮಾರ್ ಅವರು ಪೊಲೀಸ್ ಜೀಪು ತಡೆಯಲು ಮುಂದಾದ ವೇಳೆಯೂ ವಾಗ್ವಾದ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಬಂದೋಬಸ್ತ್ ಕಲ್ಪಿಸಲಾಗಿದೆ.

RELATED ARTICLES

Related Articles

TRENDING ARTICLES