Monday, May 20, 2024

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಹೆಚ್​ಡಿ ಕುಮಾರಸ್ವಾಮಿ ಫಿಕ್ಸ್?; ಇದರ ಹಿಂದಿನ ಲೆಕ್ಕಾಚಾರವೇನು?

ಬೆಂಗಳೂರು: ಮಂಡ್ಯದಿಂದ ಯಾರು ಸ್ಪರ್ಧಿ ಮಾಡಬೇಕೆಂಬ ಚರ್ಚೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. 

ಹೌದು ಮಂಡ್ಯ ಲೋಕಕ್ಷೇತ್ರ ಅಖಾಂಡಕ್ಕೆ ಭಾರೀ ಪೈಪೋಟಿ ಇದೆ.ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಬಿಜೆಪಿಯಿಂದ ಸುಮಲತಾ ಅಂಬರೀಶ್​, ಹೆಚ್​.ಡಿಕುಮಾರಸ್ವಾಮಿ, ಪುಟ್ಟರಾಜ್​ ಅಭ್ಯರ್ಥಿಗಳು ಮೈತ್ರಿ ಟಿಕೆಟ್​ಗೆ ಪ್ರಯತ್ನ ಪಡುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿಕೂಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದೇ ಸದ್ಯ ಬಹಳಷ್ಟು ಕುತೂಹಲ ಮೂಡಿಸಿರುವ ಪ್ರಶ್ನೆ.

ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿಗಳ ಮಧ್ಯೆ, ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಟಿಕೆಟ್​ಗೆ ಪೈಪೋಟಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಇತ್ತೀಚಿನ ವರದಿಗಳ ಪ್ರಕಾರ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಬಹುತೇಕ ನಮಗೆ ಎಂಬುದು ಖಚಿತವಾಗಿದೆ ಎಂದು ಈಗಾಗಲೇ ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ.

ಹೆಚ್​.ಡಿ ಕುಮಾರಸ್ವಾಮಿಯನ್ನು ಮಂಡ್ಯದಲ್ಲಿ ಸ್ಪರ್ಧೆ ಮಾಡಲು ಇರುವ ಲೆಕ್ಕಾಚಾರವೇನು..?

ಕುಮಾರಸ್ವಾಮಿ ವಿರುದ್ಧ ಅಭ್ಯರ್ಥಿ ಕಾಂಗ್ರೆಸ್ ಪಕ್ಷದಲ್ಲಿಲ್ಲ.ಅವರು ಸ್ಪರ್ಧೆ ಮಾಡಿದರೆ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಸಾಧ್ಯತೆ ಹೆಚ್ಚಿದೆ. ಇಷ್ಟೇ ಅಲ್ಲದೆ ಮಂಡ್ಯದಲ್ಲಿ ಕುಮಾರಸ್ವಾಮಿಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಕುಮಾರಸ್ವಾಮಿ ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ. ಕಾರ್ಯಕರ್ತರಲ್ಲಿ ಕೂಡ ಹೊಸ ಹುರುಪು ಬರಲಿದೆ ಎಂಬ ಲೆಕ್ಕಾಚಾರ ಜೆಡಿಎಸ್​ನದ್ದಾಗಿದೆ.

ಮತ್ತೊಂದೆಡೆ, ಕುಮಾರಸ್ವಾಮಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದೇ ಆದರೆ ಸುಮಲತಾ ಕೂಡ ಹೆಚ್ಚು ವಿರೋಧ ಮಾಡಲಾರರು ಎಂಬ ಅಂದಾಜು ಜೆಡಿಎಸ್ ನಾಯಕರದ್ದಾಗಿದೆ.

RELATED ARTICLES

Related Articles

TRENDING ARTICLES