Friday, May 17, 2024

ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಉತ್ತರಗಳು ಪ್ರಕಟ: ಆಕ್ಷೇಪಣೆ ಸಲ್ಲಿಸಲು ಮಾ.21 ಕೊನೆಯ ದಿನ

ಬೆಂಗಳೂರು : 2023-2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಮಂಡಳಿಯ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು, ಮಾದರಿ ಉತ್ತರಗಳನ್ನು ಪಡೆಯಬಹುದಾಗಿದೆ. ಮಾರ್ಚ್‌ 1ರಂದು ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ-1, ಮಾರ್ಚ್ 22ಕ್ಕೆ ಮುಕ್ತಾಯವಾಗಲಿದೆ. ಸದ್ಯ ಮಾ.1ರಿಂದ 18ರವರೆಗೆ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಮಾತ್ರ ಪ್ರಕಟಿಸಿದ್ದು, ಮಾ.20ರಿಂದ 22ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಮಂಡಲಿ ತಿಳಿಸಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಸಿಬ್ಬಂದಿಯಿದ ಮಹಿಳೆ ಮುಂದೆ ಅಸಭ್ಯ ವರ್ತನೆ!

ಆಕ್ಷೇಪಣೆ ಸಲ್ಲಿಕೆಗೆ ಮಾರ್ಚ್ 21 ಕೊನೇ ದಿನವಾಗಿದೆ. ಆನ್‌ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್‌ 19ರಿಂದ 21ರ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಮಾ.21ರ ಸಂಜೆ 5 ಗಂಟೆ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.

RELATED ARTICLES

Related Articles

TRENDING ARTICLES