Thursday, May 9, 2024

ಮಾರ್ಚ್​ 22ಕ್ಕೆ 5 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ: ಬಿಎಸ್​ ಯಡಿಯೂರಪ್ಪ

ನವದೆಹಲಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್​ 22 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದರು.

ನವದೆಹಲಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಮಿತ್ ಶಾ, ಜೆ.ಪಿ ನಡ್ಡಾ ಅವರೊಂದಿಗೆ 5 ಕ್ಷೇತ್ರಗಳ ಕುರಿತು ಚರ್ಚೆ ನಡೆಸಲಾಗಿದೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ ಬಳಿಕ ವಿಜಯೇಂದ್ರ ರಾಜೀನಾಮೆ: ಭವಿಷ್ಯ ನುಡಿದ ಈಶ್ವರಪ್ಪ

ಈಗಾಗಲೇ ಲೋಕಸಭಾ ಚುನಾವಣೆಗೆ ಬಾಕಿ ಉಳಿದಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು  ಪಕ್ಷದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅಂತಿಮಗೊಂಡಿರುವ ಪಟ್ಟಿಯನ್ನು ಇದೇ ಮಾರ್ಚ್​ 22 ರಂದು ಬಿಜೆಪಿ ಹೈಕಮಾಂಡ್​ ಘೋಷಣೆ ಮಾಡಲಿದೆ.

ಪಟ್ಟಿಯಲ್ಲಿರುವ ಸಂಭಾವ್ಯ ಅಭ್ಯರ್ಥಿಗಳು :

ಬೆಳಗಾವಿ- ಜಗದೀಶ್ ಶೆಟ್ಟರ್

ಚಿಕ್ಕಬಳ್ಳಾಪುರ- ಡಾ. ಕೆ. ಸುಧಾಕರ್

ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ

ರಾಯಚೂರು- ಅಮರೇಶ್ವರ ನಾಯಕ

ಚಿತ್ರದುರ್ಗ - ಗೋವಿಂದ ಕಾರಜೋಳ

RELATED ARTICLES

Related Articles

TRENDING ARTICLES