Sunday, April 28, 2024

ನಮ್ಮ ಮೆಟ್ರೋ ಸಿಬ್ಬಂದಿಯಿಂದ ಮಹಿಳೆ ಮುಂದೆ ಅಸಭ್ಯ ವರ್ತನೆ!

ಬೆಂಗಳೂರು : ನಗರದ ಜಾಲಹಳ್ಳಿ ಮೆಟ್ರೋ ಪ್ಲ್ಯಾಟ್​ ಫಾರ್ಮ್​ ಸಿಬ್ಬಂದಿಯೋರ್ವ ಮಹಿಳೆ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಅಸಭ್ಯವಾಗಿ ವರ್ತನೆ ತೋರಿರುವ ಘಟನೆ ನಡೆದಿದೆ.

ಈ ಕುರಿತಾಗಿ ಮೆಟ್ರೋ ಮೇಲಧಿಕಾರಿಗಳಿಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆದರೆ ಮೆಟ್ರೋ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯದಿಂದ HDK ಸ್ಪರ್ಧೆ: ಆಸ್ಪತ್ರೆಯಿಂದ ಬಂದ ಮೇಲೆ ತಿಳಿಸುತ್ತೇನೆ-ಕುಮಾರಸ್ವಾಮಿ

ಮಹಿಳೆ ಬೆಂಗಳೂರು ಪೊಲೀಸರಿಗೆ ಟ್ಯಾಗ್​ ಮಾಡಿರುವ ದೂರಿನಲ್ಲಿ ಮೆಟ್ರೋ ಸಿಬ್ಬಂದಿ ಓರ್ವ ಪ್ಲಾಟ್‌ಫಾರಂನ ಎದುರು ಭಾಗದಲ್ಲಿ ತನ್ನ ಖಾಸಗಿ ಅಂಗವನ್ನು ಸ್ಪರ್ಶಿಸಿಕೊಂಡು ದುರ್ವರ್ತನೆ ತೋರಿದ್ದಾನೆ. ಕೆಲವು ಸನ್ನೆಗಳನ್ನು ಮಾಡುತ್ತ ನಿರಂತರವಾಗಿ ನನ್ನನ್ನು ದಿಟ್ಟಿಸಿ ನೋಡುತ್ತಿರುವಂತಹ ಅನುಭವ ನನಗೆ (ಮಂಗಳವಾರ) ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಉಂಟಾಗಿದೆ.

ನಾನು ಆತನನ್ನು ಪ್ರಶ್ನೆ ಮಾಡಿದೆ. ಆದರೆ ಆತ ಕೆಲವು ಸನ್ನೆಗಳನ್ನು ಮಾಡುವ ಮೂಲಕ ನನ್ನನ್ನು ದಿಟ್ಟಿಸಿ ನೋಡುತ್ತಲೇ ಇದ್ದ. ಹಾಗಾಗಿ ನಾನು ವಿಡಿಯೋ ಮಾಡಲು ಆರಂಭಿಸಿದ ಬಳಿಕ ಅವನು ಅಲ್ಲಿಂದ ಹೊರಟು ಹೋದ ಎಂದು ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿಡಿಯೋದೊಂದಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೇಲ್​ ಮಾಡಿರುವ ಮಹಿಳೆ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

RELATED ARTICLES

Related Articles

TRENDING ARTICLES