Sunday, September 8, 2024

ನಮ್ಮ ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆ!

ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಮುಂಬೈ ಮೂಲದ ಧ್ರುವ್ ಕಕ್ಕರ್​ ಮೃತ ವಿದ್ಯಾರ್ಥಿ, ಇಂದು (ಮಾ.21) ರಂದು ಮಧ್ಯಾಹ್ನ 2.10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ, ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಸುಂದರಿಯರ ಜೊತೆ ಸರಸ ಬಿ ಟೌನ್​ನ ಸುಖಪುರುಷ!

ಸದ್ಯ ಘಟನೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸಿಬ್ಬಂದಿ ಮೆಟ್ರೋದಿಂದ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES