Monday, May 13, 2024

ಐಪಿಎಲ್​ ಆರಂಭಕ್ಕೂ ಮುನ್ನ ಅಯೋಧ್ಯೆ ರಾಮನ ದರ್ಶನ ಪಡೆದ ದಕ್ಷಿಣ ಆಫ್ರಿಕಾ ಸ್ಪಿನ್ನರ್​!

IPL 2024 : ಐಪಿಎಲ್​ 2024 ರ ಕ್ರಿಕೆಟ್​ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು ಎಲ್ಲಾ ಆಟಗಾರರು ಈಗಾಗಲೇ ತಮ್ಮ ತಮ್ಮ ತಂಡವನ್ನು ಸೇರಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ  ತಂಡದ ಅನುಭವಿ ಸ್ಪಿನ್ನರ್ ಕೇಶವ್ ಮಹಾರಾಜ್ ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಶಿಬಿರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ ಅವರು ಅಯೋಧ್ಯೆಯ ರಾಮಮಂದಿರಕ್ಕೂ ಭೇಟಿ ನೀಡಿರುವ ಮಹಾರಾಜ್ ಶ್ರೀರಾಮನ ದರ್ಶನ ಪಡೆದುಕೊಂಡಿದ್ದಾರೆ.

ಸೌತ್ ಆಫ್ರಿಕಾ ತಂಡದ ಸ್ಟಾರ್ ಆಟಗಾರ ಕೇಶವ್ ಮಹಾರಾಜ್ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಮಾರ್ಚ್ 17 ರಂದು ಭಾರತಕ್ಕೆ ಆಗಮಿಸಿದ್ದ ಮಹಾರಾಜ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಶಿಬಿರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಭ್ರೂಣಹತ್ಯೆ ಕೇಸ್ ಬಯಲು ಮಾಡಿದ್ದ ಅಧಿಕಾರಿಗೆ DHO ರಿಂದ​ ಮಾನಸಿಕ ಕಿರುಕುಳ!

ಇದೀಗ ಬಿಡುವು ಮಾಡಿಕೊಂಡು ಅಯೋಧ್ಯಗೆ ತೆರಳಿ ಬಾಲರಾಮನ ದರ್ಶನ ಪಡೆದುಕೊಂಡಿದ್ದಾರೆ. ಈ ಸಂತಸವನ್ನು ಕೇಶವ್ ಮಹಾರಾಜ್ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಅಂದಹಾಗೆಯೇ ಕೇಶವ್ ಮಹಾರಾಜ್ ಭಾರತೀಯ ಮೂಲದ ಸೌತ್ ಆಫ್ರಿಕಾ ಕ್ರಿಕೆಟಿಗ. ಸೌತ್ ಆಫ್ರಿಕಾ ಪರ 127 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಅವರು ಒಟ್ಟು 237 ವಿಕೆಟ್ ಕಬಳಿಸಿದ್ದಾರೆ.

ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ಮಹಾರಾಜ್ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದರು. ಇದೀಗ ಐಪಿಎಲ್​ ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಶಿಬಿರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

 

View this post on Instagram

 

A post shared by Keshav Maharaj (@keshavmaharaj16)

RELATED ARTICLES

Related Articles

TRENDING ARTICLES