Sunday, May 12, 2024

5,8,9 ನೇ ತರಗತಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ಕೋರ್ಟ್​ ಅನುಮತಿ!

ಬೆಂಗಳೂರು : ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಸ್ಥಗಿತಗೊಂಡಿರುವ ಪರೀಕ್ಷೆಯನ್ನು ಮುಂದುವರಿಸಲು ನ್ಯಾ.ಕೆ.ಸೋಮಶೇಖರ್‌ ಹಾಗೂ ನ್ಯಾ. ಕೆ.ರಾಜೇಶ್‌ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ.

ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಸೋಮವಾರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಮಾರ್ಚ್ 11 ರಿಂದ ಪರೀಕ್ಷೆ ಆರಂಭವಾಗಿತ್ತು. ಸುಪ್ರೀಂ ತೀರ್ಪಿನ ಬಳಿಕ ಪರೀಕ್ಷೆ ಮುಂದೂಡಲಾಗಿತ್ತು. ಈ ಬೋರ್ಡ್ ಪರೀಕ್ಷೆ ವಿದ್ಯಾರ್ಥಿಗಳು ಪೋಷಕರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಸೋನು ಶ್ರೀನಿವಾಸ್​ ಗೌಡ ಬಂಧನ: ಡಿಸಿಪಿ ಗಿರೀಶ್​ ಪ್ರತಿಕ್ರಿಯೆ!

ಪ್ರಕರಣದ ಹಿನ್ನೆಲೆ ಏನು..?

ಕರ್ನಾಟಕ ಶಿಕ್ಷಣ ಕಾಯ್ದೆಯಡಿ ರಾಜ್ಯ ಶಿಕ್ಷ ಣ ಇಲಾಖೆ 2023ರ ಅ.6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್‌ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.

ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, ಸರಕಾರದ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್‌ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್‌ಗಳ ಉಲ್ಲಂಘನೆಯಾಗಿದ್ದು, ಬೋರ್ಡ್‌ ಪರೀಕ್ಷೆ ರದ್ದುಪಡಿಸಬೇಕು ಎಂದು ಕೋರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿತ್ತು.

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಅದನ್ನು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂಕೋರ್ಟ್‌, ಸರಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಸಮಗ್ರವಾಗಿ ವಿಚಾರಣೆ ನಡೆಸಿ ಆದಷ್ಟು ಶೀಘ್ರ ತೀರ್ಪು ನೀಡುವಂತೆ ಸೂಚಿಸಿತ್ತು.

RELATED ARTICLES

Related Articles

TRENDING ARTICLES