Sunday, April 28, 2024

ರಾಮನಗರ: ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ವಶಕ್ಕೆ!

ರಾಮನಗರ: ಎಟಿಎಂ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 5.30 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ನಡೆದಿದೆ.

ಇದನ್ನೂ ಓದಿ: ಮಾಜಿ ಸಚಿವ ಡಾ.ಸುಧಾಕರ್ ರಿಂದ ಧಮ್ಕಿ : ಎಸ್​.ಆರ್​ ವಿಶ್ವನಾಥ್​ ಆರೋಪ

ಪಂಜಾಬ್​ ನ್ಯಾಷನಲ್ ಬ್ಯಾಂಕ್​ ಗೆ ಸೇರಿದ ವಾಹನ ಮತ್ತು ಹಣ ಇದಾಗಿದ್ದು ತಪಾಸಣೆ ವೇಳೆ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ತೋರಿಸದ ಕಾರಣ 5.30 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ದಾಖಲೆಗಳನ್ನು ನೀಡಿ ಹಣ ವಾಪಾಸ್​ ಪಡೆಯುವಂತೆ ಬ್ಯಾಂಕ್ ಸಿಬ್ಬಂದಿಗಳಿಗೆ ಚುನಾವಣಾಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಗಡಿ ಪ್ರದೇಶಗಳಲ್ಲಿ ಪೊಲೀಸ್ ಕಣ್ಗಾವಲು ಹೆಚ್ಚಿಸಿದ್ದು ಅಕ್ರಮವಾಗಿ ಸಾಗಾಟ ಮಾಡುವ ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

RELATED ARTICLES

Related Articles

TRENDING ARTICLES