Thursday, May 9, 2024

IPL ಹಬ್ಬಕ್ಕೆ ಕ್ಷಣಗಣನೆ.. RCBಗೆ ಚೆನ್ನೈ ಸವಾಲ್ : ಹೀಗಿದೆ ಸಂಭವನೀಯ ತಂಡ

ಬೆಂಗಳೂರು : ಐಪಿಎಲ್​ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ಐಪಿಎಲ್ 17ನೇ ಆವೃತ್ತಿ ಆರಂಭವಾಗಲಿದೆ. ಕ್ರಿಕೆಟ್ ಪ್ರೇಮಿಗಳು ಈ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಎರಡು ತಿಂಗಳಿಗೂ ಹೆಚ್ಚು ಕಾಲ ನಡೆಯಲಿರುವ ಈ ಟೂರ್ನಿಯಲ್ಲಿ 10 ತಂಡಗಳು ಚಾಂಪಿಯನ್​ ಪಟ್ಟಕ್ಕಾಗಿ ಕಾದಾಡಲಿವೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ RCB ಹಾಗೂ CSK ನಡುವೆ ಮೊದಲ ಪಂದ್ಯ ನಡೆಯಲಿದೆ.

ಐಪಿಎಲ್​ 2024 ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿಗೆ ಚೆನ್ನೈ ಸವಾಲ್ ಹಾಕಲಿದೆ. ಇದು ಟೂರ್ನಿಯ ಕಿಕ್ ಮತ್ತಷ್ಟು ಹೆಚ್ಚಿಸಲಿದೆ. ವೈಯಕ್ತಿಕ ಕಾರಣಗಳಿಂದ ಕಳೆದ 2 ತಿಂಗಳಿನಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಕೊಹ್ಲಿ ಇಂದಿನ ಪಂದ್ಯದ ಮೂಲಕ ಕ್ರಿಕೆಟ್ ಅಂಗಳಕ್ಕೆ ಇಳಿಯುತ್ತಿದ್ದಾರೆ. ಮತ್ತೊಂದೆಡೆ, ವರ್ಷದ ಬಳಿಕ ಮಹೇಂದ್ರ ಸಿಂಗ್ ಧೋನಿ ಮೈದಾನಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಚೆನ್ನೈ ಹಾಗೂ ಆರ್​ಸಿಬಿ ತಂಡಗಳು ಐಪಿಎಲ್​ನಲ್ಲಿ ಈವರೆಗೆ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಚೆನ್ನೈ 20 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಆರ್​ಸಿಬಿ ತಂಡ 10 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಅಂಕಿ ಅಂಶಗಳ ಪ್ರಕಾರ ಚೆನ್ನೈ ಇಂದಿನ ಪಂದ್ಯ ಗೆಲ್ಲುವ ಫೇವರಿಟ್ ಆಗಿದೆ.

RCB ಸಂಭವನೀಯ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಮಯಾಂಕ್ ದಾಗರ್, ಕರಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ.

ಇಂಪ್ಯಾಕ್ಟ್ ಆಟಗಾರ : ವೈಶಾಕ್ ವಿಜಯ್‌ಕುಮಾರ್

CSK ಸಂಭವನೀಯ ತಂಡ

ಋತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಶಿವಂ ದುಬೆ, ಮೊಯಿನ್ ಅಲಿ, ಎಂ.ಎಸ್. ಧೋನಿ (ವಿ.ಕೀ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ.

ಇಂಪ್ಯಾಕ್ಟ್ ಆಟಗಾರ : ಸಮೀರ್ ರಿಜ್ವಿ

RELATED ARTICLES

Related Articles

TRENDING ARTICLES