Saturday, May 11, 2024

Board Exams: 5,8,9,11ನೇ ತರಗತಿ ಬೋರ್ಡ್‌ ಎಕ್ಸಾಂಗೆ ಗ್ರೀನ್‌ ಸಿಗ್ನಲ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಗೊಂದಲದಲ್ಲಿದ್ದ ಮಕ್ಕಳು, ಪೋಷಕರಿಗೆ ಇದೀಗ ಬಿಗ್‌ ರಿಲೀಫ್‌ ಸಿಕ್ಕಿದೆ.

ಹೌದು, ಸುದೀರ್ಘ ವಿಚಾರಣೆ ಬಳಿಕ ಬೋರ್ಡ್‌ ಎಸ್ಸಾಂಗೆ  ಹೈಕೋರ್ಟ್​ ಅನುಮತಿ ನೀಡಿದೆ.ಈಗಲೇ ಸ್ಥಗಿತಗೊಂಡಿರೋ ಪರೀಕ್ಷೆ ಮುಂದೂವರೆಸಲು ಸೂಚನೆ ಕೂಡ ನೀಡ   .ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ಬಗ್ಗೆ ಸಮಾಲೋಚಿಸಿ ರಾಜ್ಯ ಸರ್ಕಾರಕ್ಕೆ ಸೂಚನೆಯನ್ನು ಹೈಕೋರ್ಟ್ ನೀಡಿದೆ.

ಸೋಮವಾರದಿಂದಲೇ ಪಬ್ಲಿಕ್ ಎಕ್ಸಾಂ

ಸೋಮವಾರದಿಂದಲ್ಲೇ ಪಬ್ಲಿಕ್​ ಪರೀಕ್ಷೆಗಳು ನಡೆಯಲಿವೆ.

ಏನಿದು ಪಬ್ಲಿಕ್‌ ಪರೀಕ್ಷೆ ಮತ್ತು ಕಾನೂನು ಹೋರಾಟ?

  • ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ 5,8,9 ಮತ್ತು 11ನೇ ತರಗತಿಗೆ ಈ ಬಾರಿ ಪಬ್ಲಿಕ್‌ ಪರೀಕ್ಷೆ ನಡೆಸಲು 2023ರ ಡಿಸೆಂಬರ್‌ನಲ್ಲಿ ಸುತ್ತೋಲೆ ಹೊರಡಿಸಿದ್ದವು.
  • ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು.
  • ಖಾಸಗಿ ಶಾಲೆಗಳ ಸಂಘಟನೆಯ ವಾದವನ್ನು ಆಲಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ 2024ರ ಮಾರ್ಚ್‌ 5ರಂದು ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿತ್ತು.ಅಂದರೆ ಪಬ್ಲಿಕ್‌ ಪರೀಕ್ಷೆ ನಡೆಸದಂತೆ ಸೂಚನೆ ನೀಡಿತ್ತು.
  • ಪಬ್ಲಿಕ್‌ ಪರೀಕ್ಷೆಗೆ ತಡೆ ನೀಡಿದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಮಾರ್ಚ್‌ 7ರಂದು ಮೇಲ್ಮನವಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಏಕಸದಸ್ಯ ಪೀಠವು ವಿಧಿಸಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿತು.ಅಂದರೆ ಮಾರ್ಚ್‌ 11ರಂದು ಆರಂಭವಾಗುವ 5,8,9ನೇ ತರಗತಿಯ ಪರೀಕ್ಷೆಗಳು ಯಥಾವತ್ತಾಗಿ ನಡೆಯಲಿದೆ ಎಂದು ತಿಳಿಸಲಾಗಿತ್ತು.
  • 11ನೇ ತರಗತಿ ಪರೀಕ್ಷೆಗಳು ಆಗಲೇ ನಡೆದು ಮುಕ್ತಾಯವಾಗಿವೆ. 5,8,9ನೇ ತರಗತಿ ಪರೀಕ್ಷೆಗಳು ಮಾರ್ಚ್‌ 11ರಂದು ಆರಂಭವಾಗಿದ್ದವು.
  • ಖಾಸಗಿ ಶಿಕ್ಷಣ ಸಂಸ್ಥೆಗಳು ಯಥಾವತ್ತಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಿದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಿವೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಿದ ಸುಪ್ರೀಂಕೋರ್ಟ್‌ ಮಂಗಳವಾರ (ಮಾರ್ಚ್‌ 12) ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿತು. ಮತ್ತು ಶಿಕ್ಷಣ ಇಲಾಖೆ ಕೂಡಾ ಎಲ್ಲಾ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿತು.
  • ಒಂದು ಕಡೆ ಸುಪ್ರೀಂಕೋರ್ಟ್‌ ಪರೀಕ್ಷೆಗೆ ತಡೆಯಾಜ್ಞೆ ನೀಡಿದ ಬೆನ್ನಿಗೇ, ಬೋರ್ಡ್‌ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ರುಪ್ಸಾ ಬೆಂಬಲಿತ ಕೆಲವು ಪೋಷಕರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಬೇಕು ಎಂಬ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿತು. ಆದರೆ, ಒಟ್ಟಾರೆ ಪ್ರಕರಣದ ವಿಚಾರಣೆಯನ್ನು ಮುಂದುವರಿಸಿತು. ಇದು‌ ಮಾರ್ಚ್‌ 14ರಂದು ನಡೆದಿತ್ತು.
  • ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಮತ್ತು ಅವಕಾಶ ಕಲ್ಪಿಸಬಾರದು ಎಂದು ಕೋರಿ ಎರಡು ಪ್ರತ್ಯೇಕ ಮಧ್ಯಂತರ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಪೀಠ ನಡೆಸಿತು.
  • ಹೈಕೋರ್ಟ್‌ನ ವಿಭಾಗೀಯ ಪೀಠವು ಮಾರ್ಚ್‌ 18ರಂದು ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.

RELATED ARTICLES

Related Articles

TRENDING ARTICLES