Friday, May 17, 2024

ನ್ಯಾಯಬೆಲೆ ಅಂಗಡಿಗಳು ರಜಾದಿನ ಹೊರತುಪಡಿಸಿ ಉಳಿದ ದಿನಗಳು ತೆರೆದಿರುವುದು ಕಡ್ಡಾಯ

ಬೆಂಗಳೂರು ಗ್ರಾಮಾಂತರ: ಜಿಲ್ಲಾ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ, ಎಲ್ಲಾ ದಿನಗಳು ಬೆಳಗ್ಗೆ 7 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆಯಬೇಕಾಗಿರುತ್ತದೆ ಹಾಗೂ ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದು ಕಡ್ಡಾಯ ಎಂದು ಆದೇಶಿಸಿದೆ.

ಇದನ್ನೂ ಓದಿ: ಮಾಜಿ ಸಚಿವ ಡಾ.ಸುಧಾಕರ್ ರಿಂದ ಧಮ್ಕಿ : ಎಸ್​.ಆರ್​ ವಿಶ್ವನಾಥ್​ ಆರೋಪ

ಒಂದು ವೇಳೆ ತಾಲ್ಲೂಕುಗಳಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ,  ಕಾರ್ಯನಿರ್ವಹಿಸದೇ ಇದ್ದಲ್ಲಿ ಆಯಾ ತಾಲೂಕಿನ ಆಹಾರ ಶಿರಸ್ತೆದಾರ್​ ಮತ್ತು ಆಹಾರ ನಿರೀಕ್ಷಕರಿಗೆ ದೂರು ನೀಡುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕು ಆಹಾರ ಶಿರಸ್ತೇದಾರ್ ಶ್ರೀಧರ್.ಎನ್ (9945724948), ದೇವನಹಳ್ಳಿ ತಾಲ್ಲೂಕು ಆಹಾರ ನಿರೀಕ್ಷಕರು ಕೆ.ಶ್ಯಾಮ್‌ಪ್ರಸಾದ್(9448376570), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ಶಿರಸ್ತೇದಾರ್ ಶಶಿಕಲಾ.ಈ (9110672505), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ನಿರೀಕ್ಷಕರು ರಾಜು ಸಬಸ್ಟೀನ್ (9945275227), ಹೊಸಕೋಟೆ ತಾಲ್ಲೂಕು ಆಹಾರ ಶಿರಸ್ತೇದಾರ್ ವಿ ನಟರಾಜ್ ರೆಡ್ಡಿ(9902294444), ಹೊಸಕೋಟೆ ತಾಲ್ಲೂಕು ಆಹಾರ ನಿರೀಕ್ಷಕರು ಬಿ.ಶಿವಕುಮಾರ್(9902805563), ನೆಲಮಂಗಲ ತಾಲ್ಲೂಕು ಆಹಾರ ಶಿರಸ್ತೇದಾರ್ ಕೃಷ್ಣಮೂರ್ತಿ(8660184016), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಜಯಕುಮಾರ್(9886781111), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಸೈಯದ್ ಅಮಾನುಲ್ಲಾ(9036434552) ತಾಲ್ಲೂಕು ಆಹಾರ ಶಾಖೆ ಸಿಬ್ಬಂದಿಗಳನ್ನು ಸಂಪರ್ಕಿಸಬಹುದಾಗಿದೆ.

RELATED ARTICLES

Related Articles

TRENDING ARTICLES