Friday, May 3, 2024

ಸಿಎಂ ಅರವಿಂದ್ ಕೇಜ್ರಿವಾಲ್ 6 ದಿನ ಇಡಿ ಕಸ್ಟಡಿಗೆ

ನವದೆಹಲಿ : ಮದ್ಯ ಹಗರಣ ಪ್ರಕರಣದಲ್ಲಿ ಬಂಧನವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ಮಾರ್ಚ್‌ 28ರ ವರಗೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ.

ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯವು ನಿನ್ನೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಇದೀಗ ದೆಹಲಿಯ ರೋಸ್​ ಅವೆನ್ಯೂ ನ್ಯಾಯಾಲಯವು 6 ದಿನಗಳ ಕಾಲ ಇಟಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಅರವಿಂದ್ ಕೇಜ್ರಿವಾಲ್ ಪರ ಕಾಂಗ್ರೆಸ್​ ನಾಯಕ ಅಭಿಷೇಕ್ ಮನು ಸಿಂಘ್ವಿ ಹಾಗೂ ಇಡಿ ಪರ ಸಾಲಿಟರ್ ಜನರಲ್ ತುಷಾರ್ ಮೆಹತಾ ವಾದ ಮಂಡಿಸಿದ್ದರು.

ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ನಿನ್ನೆ ದೆಹಲಿಯ ನಿವಾಸದಲ್ಲಿ ಅರೆಸ್ಟ್ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮಾರ್ಚ್ 15ರಂದು ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ, ಎಂಎಲ್​ಸಿ ಕವಿತಾ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇದಕ್ಕೂ ಮುನ್ನ ಈ ಪ್ರಕರಣದಲ್ಲಿ ಇಡಿ ಬಂಧನದಿಂದ ವಿನಾಯಿತಿ ನೀಡುವಂತೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಕೇಜ್ರಿವಾಲ್ ಬಂಧನಕ್ಕೆ ಕಾರಣವೇನು?

ದೆಹಲಿ ಮದ್ಯ ಹಗರಣದಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಸಂಸದ ಸಂಜಯ್ ಸಿಂಗ್ ಈಗಾಗಲೇ ಜೈಲಿನಲ್ಲಿದ್ದಾರೆ. ಕಳೆದ ವರ್ಷ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರನ್ನು ಸಿಬಿಐ ವಿಚಾರಣೆ ನಡೆಸಿತ್ತು. ಇಡಿ ದಾಖಲಿಸಿರುವ ಪ್ರಕರಣದಲ್ಲಿ ಸತತವಾಗಿ ಸಮನ್ಸ್​ಗಳು ನೀಡಲಾಗಿತ್ತು. 9 ಬಾರಿ ಸಮನ್ಸ್​ ನೀಡಿದರೂ ಅರವಿಂದ್ ಕೇಜ್ರೀವಾಲ್ ಮಾತ್ರ ವಿಚಾರಣೆಗೆ ಹಾಜರಾಗಿರಲಿಲ್ಲ.

RELATED ARTICLES

Related Articles

TRENDING ARTICLES