Thursday, May 9, 2024

BIG BREAKING : ಟಾಸ್ ಗೆದ್ದ RCB ಮೊದಲು ಬ್ಯಾಟಿಂಗ್ ಆಯ್ಕೆ

ಬೆಂಗಳೂರು : ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಐಪಿಎಲ್​ 17ನೇ ಆವೃತ್ತಿಯ ಮೊದಲ ಹೈವೋಲ್ಟೇಜ್​ ಪಂದ್ಯ ನಡೆಯುತ್ತಿದೆ. ಚೆಪಾಕ್ ಅಂಗಳದಲ್ಲಿ 2008ರಿಂದ ಚೆನ್ನೈ ತಂಡವನ್ನು ಸೋಲಿಸಲು ಆರ್​ಸಿಬಿಗೆ ಒಮ್ಮೆಯೂ ಸಾಧ್ಯವಾಗಿಲ್ಲ. ಇಂದಿನ ಪಂದ್ಯದಲ್ಲಿ ಗೆಲುವಿನ ನಗೆ ಬೀರುವ ಮೂಲಕ ಹೊಸ ಇತಿಹಾಸ ಸೃಷ್ಟಿಸುತ್ತಾರೆ ಎಂದು ಕಾದುನೋಡಬೇಕಿದೆ.

ಚೆನ್ನೈ ಹಾಗೂ ಆರ್​ಸಿಬಿ ತಂಡಗಳು ಐಪಿಎಲ್​ನಲ್ಲಿ ಈವರೆಗೆ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಚೆನ್ನೈ 20 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಆರ್​ಸಿಬಿ ತಂಡ 10 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಅಂಕಿ ಅಂಶಗಳ ಪ್ರಕಾರ ಚೆನ್ನೈ ಇಂದಿನ ಪಂದ್ಯ ಗೆಲ್ಲುವ ಫೇವರಿಟ್ ಆಗಿದೆ.

ಆರ್​ಸಿಬಿ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್(ವಿ.ಕೀ), ಅನುಜ್ ರಾವತ್, ಕರಣ್ ಶರ್ಮಾ, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.

ಚೆನ್ನೈ ತಂಡ

ಋತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಎಂ.ಎಸ್. ಧೋನಿ (ವಿ.ಕೀ), ಸಮೀರ್ ರಿಜ್ವಿ, ದೀಪಕ್ ಚಾಹರ್, ಮಹೇಶ್ ತೀಕ್ಷಣ, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ.

RELATED ARTICLES

Related Articles

TRENDING ARTICLES