ಬೆಂಗಳೂರು : ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಗೌಡ ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಇಂದು ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸೋನು ಗೌಡ ಇರಲಿದ್ದಾರೆ. ರಾಯಚೂರಿಗೆ ಕರೆದೊಯ್ದು ಪೊಲೀಸರು ಮಹಜರು ಮಾಡಲಿದ್ದಾರೆ. ಬಳಿಕ, ಸೋಮವಾರ ನ್ಯಾಯಾಧೀಶರ ಮುಂದೆ ಮತ್ತೆ ಸೋನು ಗೌಡರನ್ನು ಹಾಜರುಪಡಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸೋನು ಗೌಡ, ಈ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲ ಎಂದು ಹೇಳಿದ್ದಾರೆ. ನಾನು ಮಗುವನ್ನು ಕರೆದುಕೊಂಡು ಬಂದು 15 ದಿನವಾಗಿದೆ. ನಾನು ತಪ್ಪು ಮಾಡದಿದ್ದರೂ ಪೊಲೀಸರು ನನ್ನನ್ನು ಠಾಣೆಗೆ ಕರೆದುಕೊಂಡು ಬಂದಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ಸದ್ಯ ಪೊಲೀಸರು ಸೋನು ಗೌಡ ವಿಚಾರಣೆ ನಡೆಸುತ್ತಿದ್ದಾರೆ.
8 ವರ್ಷದ ಮಗು ದತ್ತು
ಸೋನು ಗೌಡ ಉತ್ತರ ಕರ್ನಾಟಕದ 8 ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಂಡಿದ್ದರು. ಈ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದರು. ಕಾನೂನು ಉಲ್ಲಂಘಿಸಿದ್ದಕ್ಕೆ ಮಕ್ಕಳ ಕಲ್ಯಾಣ ಇಲಾಖೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಮಕ್ಕಳ ಆರೈಕೆ ಹಾಗೂ ರಕ್ಷಣೆ (JJ ಕಾಯ್ದೆ) ಕಾಯ್ದೆ ಅಡಿಯಲ್ಲಿ ಸೋನು ಗೌಡ ಅರೆಸ್ಟ್ ಆಗಿದ್ದಾರೆ.