Monday, May 20, 2024

ಕಾಂಗ್ರೆಸ್ ಮಾಜಿ ಸಂಸದ ಮೂಡಲಗಿರಿಯಪ್ಪ ನಿಧನ

ತುಮಕೂರು : ಕಾಂಗ್ರೆಸ್ ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ(85) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಬುಧವಾರ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಮೃತ ಸಂಸದ ಮೂಡಲಗಿರಿಯಪ್ಪ ತುಮಕೂರಿನ ಶಿರಾ ಮೂಲದವರು. 1985ರಲ್ಲಿ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ರಾಜ್ಯ ರಾಜಕಾರಣ ತ್ಯಜಿಸಿ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದರು.

ಈ ಹಿಂದೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿದ್ದ ಮೂಡಲಗಿರಿಯಪ್ಪ ಆಯ್ಕೆಯಾಗಿದ್ದರು. 1989, 1991 ಹಾಗೂ 1998ರಲ್ಲಿ ಚಿತ್ರದುರ್ಗದಿಂದ ಸಂಸದರಾಗಿ ಜಯ ಗಳಿಸಿದ್ದರು. ನಾಳೆ ಬೆಳಗ್ಗೆ 10 ಗಂಟೆಗೆ ಶಿರಾ ತಾಲ್ಲೂಕಿನ ಚಿರತಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಮೂಡಲಗಿರಿಯಪ್ಪನವರ ಅಂತ್ಯಸಂಸ್ಕಾರ ನಡೆಯಲಿದೆ.

RELATED ARTICLES

Related Articles

TRENDING ARTICLES