Friday, May 17, 2024

ಲೋಕಸಭಾ ಚುನಾವಣೆ ನಂತ್ರ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೆ ಕೊಡ್ತಾರೆ: ಭವಿಷ್ಯ ನುಡಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಂತ್ರ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೆ ಕೊಡ್ತಾರೆ ಎಂದು  ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್‌‌ನಲ್ಲಿ ಗುಂಪುಗಳಿವೆ, ಈ ಗುಂಪುಗಳಿಂದ ಸರ್ಕಾರ ಬಿದ್ದು ಹೋಗಲಿದೆ.ಅಧಿಕಾರಕ್ಕಾಗಿ ಅವರಲ್ಲಿಯೇ ಕಿತ್ತಾಟ ನಡೆದಿದೆ.ಇದಕೆಲ್ಲಾ ಗುಬ್ಬಿ ಶಾಸಕರ ಬಹಿರಂಗ ಹೇಳಿಕೆಯೇ ಸಾಕ್ಷಿ.ಕೆಲವು ದಿನಗಳ ಹಿಂದಷ್ಟೇ ದಲಿತ ಸಿಎಂ ಕೂಗು ಕೇಳಿ ಬಂದಿತ್ತು,ಅನಂತರ ನಾಲ್ಕು ಡಿಸಿಎಂ ಮಾಡಬೇಕೆಂಬುದು ಮುನ್ನಲೆಗೆ ಬಂದಿತ್ತು. ಈಗ ಸಿಎಂ ಬದಲಾವಣೆ ವಿಚಾರ ಜೋರಾಗಿ ಚರ್ಚೆ ಆಗುತ್ತಿದೆ.ಇದೆಲ್ಲಾ ಬೆಳವಣಿಗೆ ನೋಡಿದಾಗ ಲೋಕಸಭಾ ಚುನಾವಣೆ ನಂತ್ರ ಸರ್ಕಾರ ಪತನವಾಗುವುದು ಖಚಿತ ಎಂದರು.

2014ರಲ್ಲಿಯೂ ಸಿದ್ದರಾಮಯ್ಯ ಸಿಎಂ ಇದ್ದಾಗ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿತ್ತು.ಅವಾಗ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ರಾ..? ಎಂದು ಪ್ರಶ್ನೆ ಮಾಡಿದ್ದರು.

ಅನುದಾನಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಇದೇ ಮೊದಲು

ಚುನಾವಣೆ ಸಮಯದಲ್ಲಿ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ತಂತ್ರ. ಅನುದಾನ ಬಂದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಇತಿಹಾಸದಲ್ಲಿಯೇ ಮೊದಲು. ಅನುದಾನದ ಕುರಿತು ಚರ್ಚಿಸಲು ಬೇರೆ ಬೇರೆ ವೇದಿಕೆಗಳಿವೆ. ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಚರ್ಚಿಸಬಹುದು. ರಾಜ್ಯ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರೇ ವಿರೋಧ ಪಕ್ಷದ ನಾಯಕರು. ಆದ್ರೆ ಅಲ್ಲಿ ಚರ್ಚಸುತ್ತಿಲ್ಲ, ಚುನಾವಣೆ ಪೂರ್ವದಲ್ಲಿ ದೆಹಲಿಗೆ ಹೋಗಿ ಹೋರಾಟ ಮಾಡುಯ ಸ್ಟಂಟ್ ಮಾಡಿದ್ದರು. ಈಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.ಇದೆಲ್ಲವೂ ಚುನಾವಣೆ ಪ್ರಚಾರದ ಗಿಮಿಕ್ ಎಂದು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದರು.

ನರೇಂದ್ರ ಮೋದಿ ಸರ್ಕಾರ ಉತ್ತಮವಾದ ಕೆಲಸ ಮಾಡಿದೆ. ಕೇಂದ್ರ ಸರ್ಕಾರದ ಅನುದಾನ ವಿಳಂಬ ಆದಾಗ ರಾಜ್ಯ ಸರ್ಕಾರ ತನ್ನ ಬಳಿ ಇದ್ದ ಹಣ ಖರ್ಚು ಮಾಡಿದ ಉದಾಹರಣೆ ಇದೆ.ನರೇಂದ್ರ ಮೋದಿಯವರ ಮೇಲೆ ಅಪ್ರಚಾರ ಮಾಡುವುದು ಅಕ್ಷಮ್ಯ ಅಪವಾದ ಎಂದು ಕಿಡಿಕಾರಿದ್ದರು.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹಸಿಸುಳ್ಳುಗಳನ್ನ ಹೇಳುತ್ತಿದ್ದಾರೆ

ನಾವು ಏನೂ ಆಪರೇಷನ್ ಅವಶ್ಯಕತೆ ಇಲ್ಲಕಾಂಗ್ರೆಸ್‌ನಲ್ಲಿನ ಗುಂಪುಗಾರಿಕೆಯಿಂದ ಸರ್ಕಾರ ಪತನವಾಗುತ್ತದೆ. ಆದ್ರೆ ವಿನಾಕಾರಣ ಬಿಜೆಪಿಯ ಮೇಲೆ ಗೂಬೆ ಕೂರಿಸುವವುದು ಸರಿ ಅಲ್ಲ. ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಹಸಿ ಸುಳ್ಳು. ಇದನ್ನು ಶಾಮನೂರು ಶಿವಶಂಕರ ಅವರೇ ಸ್ಪಷ್ಟ ಪಡಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಬೀಳಿಸಲು ಕಾಂಗ್ರೆಸ್‌ನಲ್ಲಿಯೇ ಒಳತಂತ್ರವನ್ನ ರೂಪಿಸಲಾಗುತ್ತದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್  ಹಸಿಸುಳ್ಳುಗಳನ್ನ ಹೇಳುತ್ತಿದ್ದಾರೆ ಎಂದರು.

ಬೆಳಗಾವಿ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಯಾವ ಕಂಗಟ್ಟುಗಳಿಲ್ಲ

ಇಂದು ಇಲ್ಲಾ ನಾಳೆ‌ ಟಿಕೆಟ್ ಘೋಷಣೆಯಾಗಲಿದೆ.ನನಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ನಾನಿದ್ದೇನೆ. ಕ್ಷೇತ್ರದ ಹಲವು ನಾಯಕರು ನನಗೆ ಈಗಾಗಲೇ ಆಹ್ವಾನ ನೀಡುತ್ತಿದ್ದಾರೆ. ನಾನು ಸಹ ಅವರ ಜೊತೆಗೆ ನಾನು ಸಂಪರ್ಕದಲ್ಲಿದ್ದೇನೆ. ದಿಂಗಾಲೇಶ್ವರ ಶ್ರೀಗಳು ಸ್ಪರ್ಧೆ ಮಾಡುವುದು ನನಗೆ ಗೊತ್ತಿಲ್ಲ ಎಂದರು.

ದಿಂಗಾಲೇಶ್ವರ ಶ್ರೀಗಳು ಸ್ಪರ್ಧೆ ಮಾಡುವುದು ನನಗೆ ಗೊತ್ತಿಲ್ಲ

ಮಾಧ್ಯಮಗಳ ಬಂದ ಸುದ್ದಿ ಬಂದಿದ್ದನ್ನ ನಾನು ಗಮನಿಸಿದ್ದೇನೆ. ಗ್ಯಾರಂಟಿಗಳನ್ನ ನೋಡಿ ಜನ ವೋಟ್ ಹಾಕಲ್ಲ,ಮೋದಿಯವರನ್ನು ನೋಡಿ ಲೋಕಸಭಾ ಚುನಾವಣೆಯಲ್ಲಿ ಜನರು ಬೆಂಬಲ ನೀಡುತ್ತಾರೆ.ಕಾಂಗ್ರೆಸ್ ಮಹಿಳೆಯರಿಗೆ ಹೆಚ್ಚು ಟಿಕೆಟ್ ಕೊಟ್ಟಿದ್ದು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮಹಿಳೆಯರಿಗೆ ನ್ಯಾಯ ಒದಗಿಸಿದ್ದು ನಮ್ಮ ಪಕ್ಷ.ಮಹಿಳಾ ಮೀಸಲಾತಿ ಜಾರಿಗೆ ತರುತ್ತಿರುವುದು ಮೋದಿ ಎಂದರು.

 

RELATED ARTICLES

Related Articles

TRENDING ARTICLES