Friday, May 10, 2024

ನಾಳೆಯಿಂದ ರಾಜ್ಯದಲ್ಲಿ SSLC ಪರೀಕ್ಷೆ ಆರಂಭ

ಬೆಂಗಳೂರು: ಸೋಮವಾರದಿಂದ (ಮಾ.25) ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ.

ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಬಾಲಕರು 4,41, 910 5, 4,28,058 ಬಾಲಕಿಯರಾಗಿದ್ದಾರೆ.ಒಟ್ಟುವಿದ್ಯಾರ್ಥಿಗಳ ಪೈಕಿ8.10 ಲಕ್ಷಕ್ಕೂ ಹೆಚ್ಚುಶಾಲಾವಿದ್ಯಾರ್ಥಿ ಗಳು (ರೆಗ್ಯುಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾ ವರ್ತಿತ ವಿದ್ಯಾರ್ಥಿಗಳಿದ್ದಾರೆ. 5,4254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ.ಒಟ್ಟು 2,750 ಕೇಂದ್ರಗಳಲ್ಲಿ ಏ.6ರವರೆಗೆ ಪರೀಕ್ಷೆಗಳು ನಡೆಯಲಿವೆ.

ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್‌ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

 

 

RELATED ARTICLES

Related Articles

TRENDING ARTICLES