Wednesday, May 8, 2024

ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ರಾಜಕೀಯ ‌ಸ್ಟಂಟ್ : ಶೆಟ್ಟರ್​

ಹುಬ್ಬಳ್ಳಿ : ರಾಜ್ಯ ಸರ್ಕಾರ ಬರಪರಿಹಾರದ ಅನುದಾನ ಬಂದಿಲ್ಲ ಎಂದು ಸುಪ್ರಿಂ ಕೋರ್ಟ್ ಮೊರೆ ಹೋಗುತ್ತಿರುವುದು ಕೇವಲ ರಾಜಕೀಯ ಸ್ಟಂಟ್ ಎಂದು ಸರ್ಕಾರದ ವಿರುದ್ದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ​ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್​ ಈ ತಂತ್ರಗಾರಿಕೆಯನ್ನು ಅನುಸರಿಸುತ್ತಿದೆ. ಅನುದಾನ ಬಂದಿಲ್ಲ ಎಂದು ಸುಪ್ರಿಂ ಕೋರ್ಟ್​ ಕದ ತಟ್ಟಿರುವುದು ಇತಿಹಾಸದಲ್ಲಿ ಇದೇ ಮೊದಲು, ಅನುದಾನಗಳ ಕುರಿತು ಚರ್ಚಿಸಲು ಬೇರೆ ಬೇರೆ ವೇದಿಕೆಗಳಿವೆ, ಲೋಕಸಭಾ ಮತ್ತು ರಾಜ್ಯಸಭೆಯಲ್ಲಿಯೂ ಚರ್ಚಿಸಹುದು.

ಇದನ್ನೂ ಓದಿ: ಡ್ರಾಮಾ ಬಿಟ್ಟು ಕೆಲಸ ಮಾಡಿ : ಆಸ್ಪತ್ರೆಯಿಂದ ಬರುತ್ತಿದ್ದಂತೆ ಸಿದ್ದರಾಮಯ್ಯ ವಿರುದ್ದ ಗುಡುಗಿದ HDK

ರಾಜ್ಯಸಭೆಯಲ್ಲಿ ಎಐಸಿಸಿ ಅಧಕ್ಷ್ಯ ಮಲ್ಲಿಕಾರ್ಜುನ ಖರ್ಗೆಯವರೇ ವಿರೋಧ ಪಕ್ಷದ ನಾಯಕರು ಆದರೂ ಅವರು ಅಲ್ಲಿ ಚರ್ಚಿಸುತ್ತಿಲ್ಲ, ಚುನಾವಣೆ ಪೂರ್ವದಲ್ಲಿ ದೆಹಲಿಗೆ ಹೋಗಿ ಹೋರಾಟ ಮಾಡುವ ಸ್ಟಂಟ್​ ಮಾಡಿದ್ದಾರೆ. ಇದೆಲ್ಲವು ಕೇವಲ ರಾಜಕೀಯ ಗಿಮಿಕ್​​ ಅಷ್ಟೆ.

ನರೇಂದ್ರ ಮೋದಿ ಸರ್ಕಾರ ಉತ್ತಮವಾದ ಕೆಲಸ ಮಾಡಿದೆ, ಕೇಂದ್ರ ಸರ್ಕಾರದ ಅನುದಾನ ವಿಳಂಬ ಆದಾಗ ರಾಜ್ಯ ಸರ್ಕಾರ ತನ್ನ ಬಳಿ ಇದ್ದ ಹಣ ಖರ್ಚು ಮಾಡಿದ ಉದಾಹರಣೆ ಇದೆ ಮತ್ತು ನರೇಂದ್ರ ಮೋದಿ ಸರ್ಕಾರ ಉತ್ತಮವಾದ ಕೆಲಸ ಮಾಡಿದೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES