Monday, May 20, 2024

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆ ದಿನಾಂಕ ಈಗಲೇ ಅನೌ್ನ್ಸ್​ ಆಗಿದ್ದು, ಇನ್ನೂ ಬಿಜೆಪಿ ಪಕ್ಷದ ಟಿಕೆಟ್​  ಬಿಡುಗಡೆ ಮಾಡಲು ಹೈಕಮಾಂಡ್​ ಭಾರೀ ಕಸರತ್ತು ನಡೆಸಿದ್ದು,ಇಂದು ಬಹುತೇಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. 

ಹೌದು,ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಿದ್ದ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ.

ಸುಮಾರು ಮೂರು ಗಂಟೆಯ ಕಾಲ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಒಟ್ಟು ಎಂಟು ರಾಜ್ಯಗಳ 150 ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದ್ದು,ಕರ್ನಾಟಕದ, ಛತ್ತೀಸ್​ಗಢ್, ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ಹರಿಯಾಣ, ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ರಿಲೀಸ್ : ಇವರೇ ಪ್ರಧಾನಿ ಮೋದಿ ಎದುರಾಳಿ

ಕರ್ನಾಟಕದ ಐದು ಕ್ಷೇತ್ರಗಳ ಬಗ್ಗೆಯೂ ಚರ್ಚೆ

ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಮತ್ತು ಚಿತ್ರದುರ್ಗ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ.

RELATED ARTICLES

Related Articles

TRENDING ARTICLES