Friday, September 20, 2024

SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ಉಸಿರು ಕಸಿದ ‘ಕಿಲ್ಲರ್’ ಕಾರು

ಶಿವಮೊಗ್ಗ : ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ. ಆ ಬಾಲಕಿ ಮೊಗದಲ್ಲಿ ಪರೀಕ್ಷೆ ಬರೆಯುವ ಹುಮ್ಮಸ್ಸು, ಉತ್ಸಾಹ ತುಂಬಿತ್ತು. ವಿಧಿಯಾಟ ಬಲ್ಲವರು ಯಾರು? ಪರೀಕ್ಷಾ ಕೇಂದ್ರಕ್ಕೆ ತೆರಳಬೇಕಿದ್ದ ವಿದ್ಯಾರ್ಥಿನಿ ಸೇರಿದ್ದು ಮಸಣಕ್ಕೆ!

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.

ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿರುವ ದುರ್ದೈವಿ. ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದರು. ರಸ್ತೆ ದಾಟುವ ವೇಳೆ ವಿದ್ಯಾರ್ಥಿನಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ.

ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಮಾಹಿತಿ ತಿಳಿದ ಕೂಡಲೇ ಹೊಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ, ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

Related Articles

TRENDING ARTICLES