Tuesday, May 14, 2024

ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಹಾಸನ, ಕೊಡಗು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಇಂದು ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಭಾರಿ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿರುವ ಜನರು ಕಂಚ ನಿರಾಳರಾಗಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರಿನ ಹಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ 33.0 ಡಿಗ್ರಿ ಗರಿಷ್ಠ ಉಷ್ಣಾಂಶ

ಕಲಬುರಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 20.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

RELATED ARTICLES

Related Articles

TRENDING ARTICLES