Friday, September 20, 2024

ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡಗೆ 14 ದಿನ ಜೈಲು

ಬೆಂಗಳೂರು : ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಜೈಲು ಪಾಲಾಗಿದ್ದಾರೆ.

ಸೋನು ಗೌಡಗೆ 14 ದಿನ (ಏಪ್ರಿಲ್​ 8ರ ವರೆಗೆ) ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ CJM ನ್ಯಾಯಾಲಯ ಆದೇಶ ನೀಡಿದೆ. ಇಂದು ಪೊಲೀಸ್​ ಕಸ್ಟಡಿ ಅಂತ್ಯಗೊಂಡ ಹಿನ್ನಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಗೌಡರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಿನ್ನೆ ಸೋನು ಗೌಡರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದರು.

ಸೋನು ಗೌಡ ಉತ್ತರ ಕರ್ನಾಟಕದ 8 ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಂಡಿದ್ದರು. ಈ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದರು. ಕಾನೂನು ಉಲ್ಲಂಘಿಸಿದ್ದಕ್ಕೆ ಮಕ್ಕಳ ಕಲ್ಯಾಣ ಇಲಾಖೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಮಕ್ಕಳ ಆರೈಕೆ ಹಾಗೂ ರಕ್ಷಣೆ (JJ ಕಾಯ್ದೆ) ಕಾಯ್ದೆ ಅಡಿಯಲ್ಲಿ ಸೋನು ಗೌಡ ಅರೆಸ್ಟ್ ಆಗಿದ್ದಾರೆ.

RELATED ARTICLES

Related Articles

TRENDING ARTICLES